ದೊಡ್ಡಬಳ್ಳಾಪುರ: ತಾಲೂಕಿನ ವಿದ್ಯಾರ್ಥಿಗಳ ಮೆಚ್ಚಿನ ಕಾಲೇಜೆಂದು ಮನ್ನಣೆ ಪಡೆದಿರುವ ನಗರದ ಶ್ರೀವಾಣಿ ಪದವಿ ಪೂರ್ವ ಕಾಲೇಜಿನಲ್ಲಿಂದು ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಸರಳ ಹಾಗೂ ಸಂಭ್ರಮದಿಂದ ಆಚರಿಸಿದರು.
ಈ ವೇಳೆ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬಿ.ಆರ್.ವೇಣುಗೋಪಾಲ್ ವಿದ್ಯಾರ್ಥಿಗಳ ಗುರಿ ಎಷ್ಟೆ ದೊಡ್ಡದಾಗಿದ್ದರೂ, ಗುರಿ ಸಾಧನೆ ಹಾಗೂ ಜೀವನಕ್ಕೆ ಶಿಕ್ಷಕರ ಪಾತ್ರ ಅತ್ಯಂತ ಮಹತ್ತರವಾದದು ಎಂದರು.
ಗಣಿತ ಉಪನ್ಯಾಸಕ ಎನ್.ನವೀನ್ ಕುಮಾರ್ ಮಾತನಾಡಿ, ಕೋವಿಡ್-19 ಸಂಧರ್ಭದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನ ನೀಡಿ ಉತ್ತಮ ಫಲಿತಾಂಶ ಪಡೆದಿದ್ದು, ಈಗಿನ ವಿದ್ಯಾರ್ಥಿಗಳು ಅವರನ್ನು ಮಾದರಿಯನ್ನಾಗಿಸಿಕೊಂಡು ಉತ್ತಮ ಅಂಕಗಳಿಸಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಉಪನ್ಯಾಸಕರನ್ನು ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..