ದೊಡ್ಡಬಳ್ಳಾಪುರ: ಶಿಕ್ಷಕರ ದಿನಾಚರಣೆ ಅಂಗವಾಗಿ ಲಯನ್ಸ್ ಕ್ಲಬ್ ಬೆಂಗಳೂರು ಉತ್ತರ ಹಾಗೂ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಸಂಸ್ಥೆಯ ವತಿಯಿಂದ ನಗರದ ಪ್ರಖ್ಯಾತ ಶ್ರೀ ದೇವರಾಜ್ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ಶಿಕ್ಷಕಿ ನಸಿಬಾ ಅವರನ್ನು ಸನ್ಮಾನಿಸಲಾಯಿತು.
ನಗರದ ಶ್ರೀ ದೇವರಾಜ್ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮ ನಂತರ ಮಾತನಾಡಿದ ಲಯನ್ಸ್ ಕ್ಲಬ್ ಬೆಂಗಳೂರು ಉತ್ತರದ ಹಿರಿಯ ಸದಸ್ಯೆ ಲಲಿತಾ ಶೇಷಾದ್ರಿ, ಕೋವಿಡ್-19 ಅಲೆಯ ಆತಂಕದಿಂದ ಹಲವು ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮ ಬೀರಿದೆ. ಈ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ನಿಂದ ಹಲವು ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸಿ ನೆರವು ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಈ ವೇಳೆ ಶ್ರೀ ದೇವರಾಜ್ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ದೇವಿಕಾರಾಣಿ, ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಸಂಸ್ಥೆಯ ಕ್ಲಬ್ ಪ್ರೆಸಿಡೆಂಟ್ ಎಂ.ಆರ್.ಶ್ರೀನಿವಾಸ್, ಜಂಟಿ ಕಾರ್ಯದರ್ಶಿ ಕೆ.ವೀಣಾ, ಲಯನ್ಸ್ ಕ್ಲಬ್ ಬೆಂಗಳೂರು ಉತ್ತರದ ಜಂಟಿ ಕಾರ್ಯದರ್ಶಿ ಸುಧಾ ಬಸವರಾಜ್, ವಲಯ ಅಧ್ಯಕ್ಷೆ ರತಿ ಗಾಯಕ್ ವಾಡ್, ಕಾರ್ಯದರ್ಶಿ ಅರುಣಾ ರೆಡ್ಡಿ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..