ಗಣೇಶೋತ್ಸವ ಮಾರ್ಗಸೂಚಿಗಳ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸಾಂಕ್ರಾಮಿಕ ವೈರಾಣು ಹರಡುವಿಕೆಯ ನಿಯಂತ್ರಣದ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗಣೇಶೋತ್ಸವ ಹಬ್ಬದ ಆಚರಣೆಯ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಹಬ್ಬದ ಆಚರಣೆ ಕುರಿತಂತೆ ಸರ್ಕಾರವು ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಗಣೇಶೋತ್ಸವ ಹಬ್ಬವನ್ನು ಸರಳ ರೀತಿಯಲ್ಲಿ, ಭಕ್ತಿಪೂರ್ವಕವಾಗಿ ದೇವಸ್ಥಾನ ಮತ್ತು ಮನೆಗಳಲ್ಲಿ ಅಥವಾ ಸರ್ಕಾರಿ / ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸಬೇಕು.

ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು ಅಥವಾ ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಒಂದು ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವನ್ನು ಮಾತ್ರ ಆಚರಿಸಬೇಕು ಹಾಗೂ ಗರಿಷ್ಟ 5 ದಿನಗಳಿಗಿಂತ ಹೆಚ್ಚಿನ ದಿನ ಗಣೇಶ ಹಬ್ಬ ಆಚರಿಸುವಂತಿಲ್ಲ.

ಸಾರ್ವಜನಿಕ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸಬೇಕು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡಬೇಕು. ಹಬ್ಬದ ಆಚರಣೆಯ ಆಯೋಜಕರು ಕೋವಿಡ್-19ರ ನೆಗೆಟಿವ್ ರಿಪೋರ್ಟ್ ಹಾಗೂ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಗಣೇಶ ಆಚರಣೆಯ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು.

ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಶ್ರೀ ಗಣೇಶ ಪ್ರತಿಷ್ಠಾಪನೆ ಮಾಡಬೇಕು ಹಾಗೂ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ, ಸಂಗೀತ, ನೃತ್ಯ, ಮುಖ್ಯವಾಗಿ ಡಿ.ಜೆ.ಯ ಮೂಲಕ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಮೆರವಣಿಗೆಯನ್ನು ಹೊರಡಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ. ಮನೆಯಲ್ಲಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸುವವರು, ಮೂರ್ತಿಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು. ಸರ್ಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತಿ ಕನಿಷ್ಟ ಜನಸಂಖ್ಯೆಯೊಂದಿಗೆ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಮೊಬೈಲ್ ಟ್ಯಾಂಕ್‌ಗಳಲ್ಲಿ, ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು.

ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು. ದರ್ಶನಕ್ಕಾಗಿ ಬರುವ ಭಕ್ತಾಧಿಗಳಿಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಭಕ್ತಾಧಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರಬೇಕು.

ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯತ್, ಇತರೆ ಸ್ಥಳೀಯ ಸಂಸ್ಥೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ಗಣೇಶೋತ್ಸವ ಆಚರಣೆ ಕಾಲಕ್ಕೆ, ಸಂದರ್ಭಕ್ಕನುಗುಣವಾಗಿ ಸರ್ಕಾರ ಜಿಲ್ಲಾಡಳಿತ, ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆ, ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗಬಾರದಂತೆ ಕಾಪಾಡಬೇಕು.ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಹಾಗೂ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!