ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ವತಿಯಿಂದ ಜಕ್ಕಲಮೊಡುಗು ಜಲಾಶಯಕ್ಕೆ ಬಾಗಿನ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ವತಿಯಿಂದ ತಾಲೂಕಿಗೆ ಸಮೀಪದ ಜಕ್ಕಲಮೊಡುಗು ಜಲಾಶಯಕ್ಕೆ ಭಜನೆ ಸಂಕೀರ್ತನೆಯೊಂದಿಗೆ ಬಾಗಿನ ಸಮರ್ಪಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತಾಲೂಕು ಕಲಾವಿದರ ಸಂಘದ ಕಾರ್ಯಾಲಯದಿಂದ ಹೊರಟು ಕಲಾವಿದರು, ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಬಾಗಿನದ ಪರಿಕರಗಳಿಗೆ ಪೂಜೆ ಸಲ್ಲಿಸಿ, ಭಜನೆ ಸಂಕೀರ್ತನೆ ನಡೆಸಿದರು. ನಂತರ ಗ್ರಾಮದಲ್ಲಿ ಬಾಗಿನದ ಮೆರವಣಿಗೆ ನಡೆಯಿತು.

ಬಾಗಿನ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದ, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು, ತೂಬಗೆರೆ ಹೋಬಳಿಯಲ್ಲಿ ನೀರಿಗೆ ಇಂದಿಗೂ ಅಭಾವವಿದೆ. ಸಾವಿರಾರು ಅಡಿ ಕೊರೆದರೂ ಸಹ ನೀರು ಸಿಗುತ್ತಿಲ್ಲ. ಆದರೆ ಈ ವರ್ಷ ಹೋಬಳಿಯಲ್ಲಿ ಮಳೆ ಸುರಿದಿರುವುದು ಸಂತಸ ತಂದಿದೆ. ಜಕ್ಕಲ ಮಡುಗು ಜಲಾಶಯ ನಿರ್ಮಾಣ ಯೋಜನೆಯ ಹರಿಕಾರರಾದ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ವರ ಶ್ರಮ ಸ್ಮರಣೀಯ. ಅಣೆಕಟ್ಟನ್ನು ಎತ್ತರಿಸಿ, ತೂಬಗೆರೆ ಭಾಗದ ಕೆರೆ, ಕುಂಟೆಗಳನ್ನು ತುಂಬುವಂತೆ ಮಾಡಿದರೆ ಇಲ್ಲಿನ ರೈತರಿಗೆ ಅನುಕೂಲವಾಗಲಿದೆ ಎಂದರು.

ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ  ಮಾತನಾಡಿ, ಜಕ್ಕಲಮೊಡುಗು ಜಲಾಶಯದಲ್ಲಿ ನೀರಿಲ್ಲದಿದ್ದರೆ ಇಂದು ದೊಡ್ಡಬಳ್ಳಾಪುರ  ನಗರಕ್ಕೆ ನೀರಿಗೆ ಹಾಹಾಕಾರವಾಗುತ್ತಿತ್ತು. ದೊಡ್ಡಬಳ್ಳಾಪುರ ಹಾಗೂ ಚಿಕ್ಕಬಳ್ಳಾಪುರ ಎರಡೂ ನಗರಗಳಿಗೆ ನೀರುಣಿಸುವ ಜಲಾಶಯಕ್ಕೆ ಮೂರನೇ ಬಾರಿ ಬಾಗಿನ ಅರ್ಪಿಸುತ್ತಿರುವುದು ಸಂತಸವಾಗಿದ್ದು, ಪ್ರತಿ ವರ್ಷ ಇದೇ ರೀತಿ ಮಳೆ ಬೆಳೆ ಆಗಲಿ ಎಂದು ಆಶಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಶೇಖರ್ ಪ್ರಸ್ತಾವಿಕವಾಗಿ ಮಾತನಾಡಿ, ಕಲೆಯ ಜೀವಂತಿಕೆಗೆ, ಕಲಾವಿದರು ನೆಮ್ಮದಿಯಿಂದ ಇರಬೇಕು. ಇದಕ್ಕಾಗಿ ಮಳೆ ಬೆಳೆ ಆಗಬೇಕು. ಈಗ ದೈವ ಕೃಪೆಯಿಂದ ಜಲಾಶಯ ತುಂಬಿದ್ದು, ಕಲಾವಿದರಿಂದ ಭಜನೆ ಸಂಕೀರ್ತನೆಗಳೊಂದಿಗೆ ಬಾಗಿನ ಸಮರ್ಪಣೆ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಬಾಬು ಗ್ರಾ.ಪಂ.ಸದಸ್ಯ ರವಿಕುಮಾರ್, ಜಿ.ಪಂ ಮಾಜಿ ಸದಸ್ಯ ಅರವಿಂದ್, ತಾಲೂಕು ಕಲಾವಿದರ ಸಂಘದ ಗೌರವ ಅಧ್ಯಕ್ಷ ಎಸ್.ರಾಮಮೂರ್ತಿ, ಉಪಾಧ್ಯಕ್ಷರಾದ ಜಿ.ಮುನಿರಾಜು, ಕೆ.ನರಸಿಂಹಯ್ಯ, ಖಜಾಂಚಿ ಎಚ್.ಮುನಿಪಾಪಯ್ಯ, ಹಿರಿಯ ಕಲಾವಿದರಾದ ಎಂ.ವೆಂಕಟರಾಜು, ಟಿ.ಎಸ್.ವೆಂಕಟೇಶ್,ತಮ್ಮಣ್ಣ, ನಾಟಕ ನಿರ್ದೇಶಕರಾದ ಟಿ.ವಿ.ಕೃಷ್ಣಪ್ಪ, ಅನಿಕೇತನ ಟ್ರಸ್ಟ್ ಕಾರ್ಯದರ್ಶಿ ಡಿ.ಶ್ರೀಕಾಂತ ಮೊದಲಾದವರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]