ಬೆಂ.ಗ್ರಾ.ಜಿಲ್ಲೆ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗೌರವ ಸಂಭಾವನೆ ಆಧಾರಿತವಾಗಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಎಸ್.ಎಲ್.ಸಿ ಪೂರೈಸಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನೆಲಮಂಗಲ ತಾಲ್ಲೂಕಿನ ನರಸೀಪುರ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಸಾಮಾನ್ಯ ಅರ್ಹತೆಯ ಗ್ರಾಮೀಣ ಅಭ್ಯರ್ಥಿ ಹಾಗೂ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ 2ಎ ಅರ್ಹತೆಯ ಗ್ರಾಮೀಣ ಅಭ್ಯರ್ಥಿಗಳು ಅರ್ಜಿಯನ್ನು 2021ರ ಅಕ್ಟೋಬರ್ 04 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಗ್ರಂಥಾಲಯ, 714, ನೆಲ ಮಹಡಿ, 5ನೇ ಮುಖ್ಯ ರಸ್ತೆ, 10ನೇ ಕ್ರಾಸ್, ಎಂ.ಸಿ ಲೇಔಟ್, ವಿಜಯನಗರ, ಬೆಂಗಳೂರು-560040 ಹಾಗೂ ದೂರವಾಣಿ ಸಂಖ್ಯೆ: 080-23352460 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..