ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ವರ್ಗಗಳಕಲ್ಯಾಣ ಇಲಾಖೆ ವತಿಯಿಂದ ಶೀ ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2021ರ ಅಕ್ಟೋಬರ್ 20ರಂದು ರಾಜ್ಯ ಸರ್ಕಾರದ ವತಿಯಿಂದ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ.
ಅರ್ಹ ವ್ಯಕ್ತಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು 2021ರ ಸೆಪ್ಟೆಂಬರ್ 15ರೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಇವರಿಗೆ ನೇರವಾಗಿ ಸಲ್ಲಿಸುವುದು.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 205, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..