ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2021-22ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಆಂಗ್ಲ ಮಾಧ್ಯಮದಲ್ಲಿ 6 ರಿಂದ 9ನೇ ತರಗತಿ ಬೋಧಿಸಲು ವಿವಿಧ ವಿಷಯಗಳ ಶಿಕ್ಷಕರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ, ಸ್ಥಳೀಯ ಅರ್ಹ ಅತಿಥಿ/ ನಿವೃತ್ತಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ
ಕನ್ನಡ ಭಾಷಾ ಶಿಕ್ಷಕರ 01 ಹುದ್ದೆಗೆ ಐಚ್ಛಿಕ ಕನ್ನಡ ವಿಷಯದಲ್ಲಿ ಬಿ.ಎ/ಬಿ.ಎಡ್., ವಿದ್ಯಾರ್ಹತೆ, ವಿಜ್ಞಾನ ಶಿಕ್ಷಕರ 01 ಹುದ್ದೆಗೆ ಬಿ.ಎಸ್.ಸಿ/ಬಿ.ಎಡ್. ವಿದ್ಯಾರ್ಹತೆ, ಗಣಿತ ಶಿಕ್ಷಕರ 01 ಹುದ್ದೆಗೆ ಬಿ.ಎಸ್.ಸಿ/ಬಿ.ಎಡ್ ವಿದ್ಯಾರ್ಹತೆ ಹಾಗೂ ಉರ್ದು ಶಿಕ್ಷಕರ 01 ಹುದ್ದೆಗೆ ಐಚ್ಛಿಕ ಉರ್ದು ವಿಷಯದಲ್ಲಿ ಬಿ.ಎ/ಬಿ.ಎಡ್. ವಿದ್ಯಾರ್ಹತೆ ಹೊಂದಿರುವವರು ತಮ್ಮ ಸ್ವವಿವರಗಳಿರುವ (biodata, resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ 2021ರ ಸೆಪ್ಟೆಂಬರ್ 30 ರೊಳಗೆ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ಗ್ರಾಮ, ನೆಲಮಂಗಲ ತಾಲ್ಲೂಕು, ಮೊ.ಸಂ.: 7019605870, 8746993589, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಟಿ.ಬಿ. ಬಸ್‌ಸ್ಟಾಪ್ ಹತ್ತಿರ, ಸುಭಾಶ್ ನಗರ, ನೆಲಮಂಗಲ ತಾಲ್ಲೂಕು, ದೂ.ಸಂ.: 080-27725445 ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 216, 2ನೇ ಮಹಡಿ, ಜಿಲ್ಲಾಧಿಕಾರಿಗಳ ಹೊಸ ಸಂಕೀರ್ಣ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂ.ಸಂ.: 080-29787455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..