ದೊಡ್ಡಬಳ್ಳಾಪುರ: ತಾಲೂಕಿನ ಹಮಾಮ್ ಗ್ರಾಮದಲ್ಲಿ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಹಮಾಮ್ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಯೋಜನೆಯಾದ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿ 4ರಿಂದ 8 ತಿಂಗಳ ವಯಸ್ಸಿನ ಹೆಣ್ಣು ಕರುಗಳಿಗೆ ಕಂದು ರೋಗದ ವಿರುದ್ಧ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಡಾ.ಎಂ.ಆಂಜನಪ್ಪ, ಬ್ಯಾಕ್ಟೀರಿಯಾಗಳಿಂದ ಬರುವ ಕಂದು ರೋಗದ ಬಗ್ಗೆ ಎಚ್ಚರಿಕೆ ವಹಿಸಬೇಕಿದ್ದು, ಸುಖ್ತ ಸಮಯದಲ್ಲಿ ಲಸಿಕೆ ಹಾಕಿಸಿ, ರೋಗ ಬರದಂತೆ ತಡೆಗಟ್ಟಬೇಕಿದೆ ಎಂದರು.
ಸಂಧರ್ಭದಲ್ಲಿ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಜಿ.ಎಂ.ನಾಗರಾಜ ಮಾತನಾಡಿ, ಕಂದು ರೋಗದ ಮಹತ್ವ ಮತ್ತು ಅದರ ವಿರುದ್ಧ ನಾವೂ ಏಕೆ ಲಸಿಕೆಯನ್ನು ಹಾಕಿಸಬೇಕೆಂದು ನೆರೆದಿದ್ದ ಪಶುಪಾಲಕರಿಗೆ ಮಾಹಿತಿಯನ್ನು ನೀಡಿದರು.
ಅಧ್ಯಕ್ಷತೆಯನ್ನು ಹಾಲುಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ನಾರಾಯಣಪ್ಪ ವಹಿಸಿದ್ದರು.
ಗ್ರಾಮದಲ್ಲಿರುವ 4-8 ತಿಂಗಳ ವಯಸ್ಸಿನ 30 ಕರುಗಳಿಗೆ ಕಂದು ರೋಗದ ವಿರುದ್ಧ ಲಸಿಕೆಯನ್ನು ಹಾಕಲಾಯಿತು.
ಈ ಸಂದರ್ಭದಲ್ಲಿ ಕೊನಘಟ್ಟ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಮೊಹಿಸಿನ್ ತಾಜ್, ಹಮಾಮ್ ಗ್ರಾಮದ ಗ್ರಾ.ಪಂ. ಸದಸ್ಯರಾದ ಪ್ರಕಾಶ್, ಬಾಲರಾಜು ಸುಮಂಗಳಮ್ಮ, ಇಲಾಖೆಯ ಉಪನಿರ್ದೇಶಕರಾದ ಡಾ.ಜಿ.ಎಂ.ನಾಗರಾಜ, ಮತ್ತು ತಾಲ್ಲೂಕಿನ ಪಶುವೈದ್ಯರುಗಳಾದ ಡಾ.ಎಸ್.ಪಿ. ಲೋಕೇಶ, ಡಾ. ಮಂಜುನಾಥ್.ಟಿ.ಕೆ, ಡಾ.ರಾಜೇಶ್, ಹಾಲು ಉತ್ಪಾದಕ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಮುನಿರಾಜು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..