ಮನವೊಲಿಸಿ ಕೋವಿಡ್ ಲಸಿಕೆಯ ಶೇ.100 ರಷ್ಟು ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಮಂಗಳವಾರ ಮತ್ತು ಬುಧವಾರ  ವಿಶೇಷ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು,ಈ ಅಭಿಯಾನದಲ್ಲಿ ಇಲ್ಲಿಯವರೆಗೆ ಕೋವಿಡ್ ಲಸಿಕೆ ಪಡೆಯದೆ ಬಾಕಿ ಉಳಿದಿರುವ ಎಲ್ಲಾ 18 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ಲಸಿಕೆಯನ್ನು ಮತ್ತು ಮೊದಲನೇ ಡೋಸ್ ಪಡೆದು  2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ಲಸಿಕಾಕರಣ ಮಾಡಲು ಎಲ್ಲಾ  ತಾಲೂಕುಗಳ ಅಧಿಕಾರಿಗಳು  ಅಗತ್ಯ ಕ್ರಮವಹಿಸಬೇಕು ಹಾಗೂ ಸಾರ್ವಜನಿಕರು  ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಗ್ರಾಮ  ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ  ನಡೆದ ಕೋವಿಡ್ ಲಸಿಕಾಕರಣ ಕುರಿತ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜಾಗೃತಿ ಮೂಡಿಸಿ ಮನವೊಲಿಸಿ: ಜಿಲ್ಲೆಯಲ್ಲಿ ಈವರೆಗೆ 18 ವರ್ಷ ಮೇಲ್ಪಟ್ಟ ಶೇ.71ರಷ್ಟು  ಜನರು ಮೊದಲನೇ ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ ಇನ್ನೂ ಶೇ. 29 ರಷ್ಟು ಜನರು  ಬಾಕಿ ಇದ್ದು ಮುಂದಿನ ಒಂದೆರಡು ದಿನಗಳಲ್ಲಿ   ಲಸಿಕಾಕರಣ  ಮಾಡಿ ಶೇ.100ರಷ್ಟು ಸಾಧನೆ ಮಾಡಬೇಕು, ಗ್ರಾಮೀಣ ಭಾಗದಲ್ಲಿ ಲಸಿಕಾಕರಣ ಮತ್ತಷ್ಟು ವೇಗ ಪಡೆದುಕೊಳ್ಳಬೇಕು ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಗ್ರಾಮೀಣ ಭಾಗದಲ್ಲಿ ಲಸಿಕೆ ಬಗ್ಗೆ ಕೆಲವೊಂದು ತಪ್ಪು ಕಲ್ಪನೆಗಳಿರುವುದಾಗಿ ಪಿಡಿಒಗಳು ತಿಳಿಸಿದ್ದಾರೆ. ಅಂತಹವರಿಗೆ ಲಸಿಕೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು.

ಲಸಿಕೆಯಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಹೇಳಬೇಕು  ಈ ನಿಟ್ಟಿನಲ್ಲಿ ಮಂಗಳವಾರ ಮತ್ತು ಬುಧವಾರವೂ ಕೂಡ ಜಿಲ್ಲೆಯಾದ್ಯಂತ  ಎಲ್ಲಾ  ತಾಲೂಕುಗಳನ್ನು  ಒಳಗೊಂಡಂತೆ 227  ಲಸಿಕಾ  ಕೇಂದ್ರಗಳಲ್ಲಿ ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಈ ಅಭಿಯಾನದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳು ಶೇ.100 ರಷ್ಟು ಸಾಧನೆ ಮಾಡಬೇಕು ಆಯಾ ಗ್ರಾಮ ಪಂಚಾಯಿತಿ ಪಿಡಿಒಗಳು ಮತ್ತು *ಗ್ರಾ.ಪಂ. ಅಧ್ಯಕ್ಷರು, ಸದಸ್ಯರು*   ಹೆಚ್ಚಿನ ಒತ್ತು ಕೊಡುವ ಮೂಲಕ ಲಸಿಕಾಕರಣ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಕಾರ್ಯಪಡೆಗಳ ಅಧಿಕಾರಿಗಳು, ಪಿ.ಡಿ.ಓ ಗಳು ಮತ್ತು ಸಿಬ್ಬಂದಿ, ಎಲ್ಲಾ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು/ಸಿಬ್ಬಂದಿ ಮತ್ತಿತರ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮರೋಪಾದಿಯಲ್ಲಿ ಸಮನ್ವಯತೆಯೊಂದಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವುದೇ ಲಸಿಕಾಕರಣದ ಈಗೀನ ವೇಗಕ್ಕೆ ಕಾರಣವಾಗಿದೆ.‌ ಶೇ.100 ರಷ್ಟು ಪ್ರಗತಿ ಸಾಧಿಸಲು ಮತ್ತಷ್ಟು ಲಸಿಕಾಕರಣವನ್ನು ಚುರುಕು ಗೊಳಿಸಬೇಕು ಎಂದರು.

ಜಿಲ್ಲೆಯಾದ್ಯಂತ ಮುಂದಿನ  ಒಂದೆರಡು  ದಿನಗಳಲ್ಲಿ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಅಭಿಯಾನದ  ರೀತಿ ಲಸಿಕಾಕರಣವನ್ನು  ಕೈಗೊಂಡು   ಮೊದಲ ಡೋಸ್  ಲಸಿಕೆಯನ್ನೂ ಪಡೆಯದೆ ಬಾಕಿ ಇರುವ  18 ವರ್ಷ ಮೇಲ್ಪಟ್ಟ ಎಲ್ಲ ಅರ್ಹರಿಗೆ ಲಸಿಕೆಯನ್ನು ನೀಡಬೇಕು. ಪ್ರತಿದಿನ 50 ಸಾವಿರ ಡೋಸ್ ಲಸಿಕೆಯನ್ನು  ನೀಡಿ ಶೇ.100 ರಷ್ಟು ಲಸಿಕಾಕರಣ ಮಾಡಲೇಬೇಕೆಂದು ಅವರು ಅಧಿಕಾರಿಗಳಿಗೆ  ಖಡಕ್ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ್ ಹಾಗೂ ಇಓ ಗಳು ಇನ್ನೂ ಎರಡು ದಿನಗಳಲ್ಲಿ‌ ಲಸಿಕಾಕರಣದ  ನಿಧಾನಗತಿ ವೇಗದಿಂದಾಗಿ ಬಾಕಿ ಉಳಿದಂತಹ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಲಸಿಕಾಕರಣವನ್ನು ಹೆಚ್ಚಿನ ರೀತಿಯಾಗಿ ನಡೆಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಲಸಿಕಾಕರಣ ಒಂದೇ ಶಾಶ್ವತ ಪರಿಹಾರ: ಕೋವಿಡ್ ಸೋಂಕು ನಿಯಂತ್ರಣ ಮತ್ತು ಸಂಭಾವ್ಯ  ಮೂರನೇ ಅಲೆ ಬಾರದಂತೆ ತಡೆಯುವ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರು ಕಡ್ಡಾಯವಾಗಿ ಪಡೆದು ಸುರಕ್ಷಿತ ವಲಯದಲ್ಲಿರಬೇಕಾಗಿರುತ್ತದೆ. ಜಿಲ್ಲೆಯಾದ್ಯಂತ ಈಗಾಗಲೇ ಲಸಿಕಾಕರಣ ಪ್ರಕ್ರಿಯೆಯು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಕೋವಿಡ್-19ರ ಮಹಾಮಾರಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಲಸಿಕಾಕರಣ ಒಂದೇ ಶಾಶ್ವತ ಪರಿಹಾರವಾಗಿದೆ ಎಂದರು. 

ಮನೆ ಮನೆ  ಭೇಟಿ ಮಾಡಿ ಲಸಿಕಾ  ಕೇಂದ್ರಗಳಿಗೆ  ಕರೆ ತನ್ನಿ: ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿಗಳ ವ್ಯಾಪ್ತಿ ಒಳಗಡೆ ವಿಭಾಗ (ಸೆಕ್ಷನ್) ಮಟ್ಟದಲ್ಲಿ ಲಸಿಕೆಯನ್ನು ನೀಡಿದರೆ ಮಾತ್ರ ಜಿಲ್ಲೆಯು ಲಸಿಕಾಕರಣದಲ್ಲಿ 100% ಸಾಧನೆ ಮಾಡಬಹುದು. ಅದೇ ರೀತಿಯಾಗಿ ಪ್ರತಿಯೊಂದು ಗ್ರಾಮ/ಹಳ್ಳಿಯಲ್ಲಿರುವ ಮನೆ-ಮನೆಗಳಿಗೆ ಭೇಟಿ ನೀಡಿ ಮನವೊಲಿಸಿ  ಲಸಿಕಾ ಕೇಂದ್ರಗಳಿಗೆ  ಕರೆತಂದು ಪ್ರತಿಯೊಬ್ಬರಿಗೂ ವ್ಯಾಕ್ಸಿನೇಷನ್ ಮಾಡಬೇಕು. ಮನೆ ಮನೆ ಭೇಟಿ ನಿಡುವ ಮುನ್ನ  ನೀಲ ನಕ್ಷೆ ರೂಪಿಸಿಕೊಂಡು ಯೋಜಿತ ರೀತಿಯಲ್ಲಿ ಲಸಿಕಾಕರಣ ಕೇಂದ್ರಕ್ಕೆ ಕರೆ ತರಲು ಮುಂದಾಗಬೇಕು.ಮುಂಚಿತವಾಗಿ ಸ್ಥಳೀಯರಿಗೆ ಮಾಹಿತಿ ನೀಡಬೇಕು ಎಂದರು.  

ಕೆಲಸ ನಿಮಿತ್ತ ಹಳ್ಳಿಗಳಿಂದ ಪಟ್ಟಣ/ನಗರಗಳಿಗೆ ಬರುವಂತಹವರಿಗೆ ಕೆಲಸ ಮಾಡುವ ಸ್ಥಳಗಳಲ್ಲಿಯೇ ಕಡ್ಡಾಯವಾಗಿ ವ್ಯಾಕ್ಸಿನೇಶನ್ ಮಾಡಬೇಕು. ಒಟ್ಟಾರೆ  ಇನ್ನೂ  ಲಸಿಕೆ  ಪಡೆಯದಿರುವ 18 ವರ್ಷ  ಮೇಲ್ಪಟ್ಟ  ಎಲ್ಲರನ್ನು  ಮನವೊಲಿಸಿ ಕಡ್ಡಾಯವಾಗಿ ವ್ಯಾಕ್ಸಿನೇಷನ್ ಮಾಡಿಸಿಕೊಳ್ಳಲು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದಿರಾ ಆರ್.ಕಬಾಡೆ, ವಿವಿಧ  ಗ್ರಾಮ ಪಂಚಾಯ್ತಿಗಳ  ಅಧ್ಯಕ್ಷರು, ಸದಸ್ಯರು ಮತ್ತು ತಹಶೀಲ್ದಾರ್ ಗಳು ,ಇಓ ಗಳು ಹಾಗೂ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!