ದೊಡ್ಡಬಳ್ಳಾಪುರ: ಜೆಡಿಎಸ್ ಪಕ್ಷದ ಮುಖಂಡ ಹಾಗೂ ಪಿಎಲ್ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಪುಟ್ಟಬಸವರಾಜು ಅವರು ಇಂದು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕನಸವಾಡಿ ಗ್ರಾಮ ಪಂಚಾಯತಿ ಸದಸ್ಯೆ ಹೇಮಾ ಸುಬ್ರಮಣ್ಯ, ಹಾಗೂ ವಿಎಸ್ ಎಸ್ ಎನ್ ಮಾಜಿ ನಿರ್ದೇಶಕರ ಸುಬ್ರಮಣ್ಯ ಅವರೊಂದಿಗೆ ಬಿಜೆಪಿ ಪಕ್ಷ ಸೇರ್ಪಡೆಯಾದರು.
ಈ ವೇಳೆ ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಎನ್.ನಾಗರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿ, ಜಿಲ್ಲಾ ಖಜಾಂಚಿ ಸಿ.ನಾರಾಯಣ ಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಹೆಚ್.ಎಸ್.ಅಶ್ವಥ್ ನಾರಾಯಣ್ ಕುಮಾರ್, ಮಧುರೆ ಹೋಬಳಿ ಅಧ್ಯಕ್ಷ ಅನಿಲ್ ಕುಮಾರ್, ಟಿ ಎ ಪಿ ಎಂಸಿಎಸ್ ನಿರ್ದೇಶಕ ಸಿದ್ದರಾಮಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ರಾಜಘಟ್ಟ ಕಾಂತರಾಜು, ಶಿವಾನಂದ ರೆಡ್ಡಿ, ಎಲ್ಐಸಿ ಟಿ.ಜಿ.ಮಂಜುನಾಥ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಎನ್.ಆರ್.ಮನು, ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ ಸದಸ್ಯೆ ಸರೋಜ ಮಂಜುನಾಥ್, ಮುನಿರಾಜು, ತಾಲೂಕು ಎಸ್ಸಿ ಮೋರ್ಚಾ ಅಧ್ಯಕ್ಷ ದೇವರಾಜ, ತಾಲ್ಲೂಕು ಮಾಧ್ಯಮ ವಕ್ತಾರ ಸಿ. ನಾಗರಾಜು ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..