ದೊಡ್ಡಬಳ್ಳಾಪುರ: ಮಕ್ಕಳ ತಾತ್ಸಾರ ಭಾವನೆಯಿಂದ ಬೇಸತ್ತ ತಂದೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪಾಲ್ ಪಾಲ್ ದಿನ್ನೆ ಬಳಿ ನಡೆದಿದೆ.
ಮೃತರನ್ನು ಮಾರಸಂದ್ರ ಮೂಲದ ನಾಗರಾಜ್ (70) ಎಂದು ಗುರುತಿಸಲಾಗಿದ್ದು, ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರನ್ನು, ಮಗ ಹಾಗೂ ಮಗಳು ಕಾಳಜಿವಹಿಸದ ಕಾರಣ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..