ಸರ್ಕಾರಿ ದೇವಸ್ಥಾನಗಳಿಗೆ ದೇವರೇ ಮಾಲಿಕರು: ಮಾಲೀಕನ ಜಾಗದಲ್ಲಿ ಪೂಜಾರಿಗಳಾಗಲೀ, ಜಿಲ್ಲಾಧಿಕಾರಿಗಳು ಸೇರಿದಂತೆ ಇತರೆ ಸರ್ಕಾರಿ ಅಧಿಕಾರಿಗಳು ನಿಲ್ಲುವಂತಿಲ್ಲ – ಸುಪ್ರೀಂ ಕೋರ್ಟ್

ನವದೆಹಲಿ: ಸರ್ಕಾರಿ ದೇವಸ್ಥಾನದ ಒಡೆತನಕ್ಕೆ ಸಂಬಂಧಿಸಿದಂತೆ; ಮಧ್ಯಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ, ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ದೇವಸ್ಥಾನ ಮತ್ತು ಅದಕ್ಕೆ ಸಂಬಂಧಿಸಿದ ಆಸ್ತಿಗಳ ಮಾಲಿಕನ ಸ್ಥಾನದಲ್ಲಿ ಸಂಬಂಧಪಟ್ಟ ದೇವರು ಇರುತ್ತಾನೆಯೇ ಹೊರತು; ಪೂಜಾರಿಗಳಾಗಲೀ, ಜಿಲ್ಲಾಧಿಕಾರಿಗಳು ಸೇರಿದಂತೆ ಇತರೆ ಸರ್ಕಾರಿ ಅಧಿಕಾರಿಗಳಲ್ಲ ಎಂದು ಹೇಳಿದೆ.

ಮಾಲೀಕನ ಜಾಗದಲ್ಲಿ ಪೂಜಾರಿಗಳಾಗಲೀ, ಸರ್ಕಾರಿ ಅಧಿಕಾರಿಗಳಾಗಲೀ ನಿಲ್ಲುವಂತಿಲ್ಲ. ದೇವಸ್ಥಾನಕ್ಕೆ ಸಂಬಂಧಿಸಿದ ಜಾಗವನ್ನು ದೇವರ ಪರವಾಗಿ ಪೂಜಾರಿಗಳು ಅಥವಾ ಅಧಿಕಾರಿಗಳು ವಶಕ್ಕೆ ತೆಗೆದುಕೊಳ್ಳುತ್ತಾರೆ. ಆದ್ದರಿಂದ ತಾವೇ ಅದರ ಹಕ್ಕುದಾರರು ಎನ್ನುವಂತಿಲ್ಲ ಎಂದು ಸರ್ವೋಚ್ಚ ಪೀಠ ಖಚಿತಪಡಿಸಿದೆ. ಇದೇ ವೇಳೆ ಈ ನಿಯಮ ಖಾಸಗಿ ದೇವಸ್ಥಾನಗಳಿಗೆ ಅನ್ವಯಿಸುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

ಮಧ್ಯಪ್ರದೇಶ ಸರ್ಕಾರ ಇತ್ತೀಚೆಗೆ ಎರಡು ಸುತ್ತೋಲೆಗಳನ್ನು ಹೊರಡಿಸಿ, ಮಾಲಿಕರ ಜಾಗದಲ್ಲಿ ಪೂಜಾರಿಗಳ ಹೆಸರು ಇರಬಾರದು. ಹಾಗಿದ್ದರೆ ಅನಧಿಕೃತವಾಗಿ ಪೂಜಾರಿಗಳು ಮಾರುವ ಅಪಾಯವಿದೆ ಎಂದು ಆದೇಶಿಸಿತ್ತು. ಇದನ್ನು ಪೂಜಾರಿಗಳು ವಿರೋಧಿಸಿದ್ದರು. ಅದರ ಪರವಾಗಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯ ತೀರ್ಪು ನೀಡಿತ್ತು. ಈ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯವೀಗ ವಜಾ ಮಾಡಿದೆ. ಅಲ್ಲದೇ ಈ ತೀರ್ಪಿಗೆ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮಜನ್ಮಭೂಮಿಯ ಮಾಲಿಕತ್ವವನ್ನು ಉದಾಹರಣೆಯಾಗಿ ನೀಡಿ ಸಮರ್ಥಿಸಿಕೊಂಡಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!