ಬೆಂ.ಗ್ರಾ.ಜಿಲ್ಲೆಯಲ್ಲಿ ಸಾಕ್ಷರತೆ ಶೇ100 ಪ್ರಗತಿ ಸಾಧಿಸಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ವಯಸ್ಕ ಶಿಕ್ಷಣದ ಮೂಲಕ ಅನಕ್ಷರಸ್ಥರಿಗೆ ಶಿಕ್ಷಣ ನೀಡಿ, ಸಾಕ್ಷರರನ್ನಾಗಿಸಬೇಕು ಹಾಗೂ ಜಿಲ್ಲೆಯಲ್ಲಿ ಶೇ.100 ರಷ್ಟು ಸಾಕ್ಷರತೆಯನ್ನು ಸಾಧಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಹಾಗೂ ಎನ್‌.ಎಸ್.ಎಸ್ ಸಹಯೋಗದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ 

ನಡೆದ 55ನೇ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಎಲ್ಲರಿಗೂ ಶಿಕ್ಷಣ ದೊರೆಯಬೇಕು ಈ ನಿಟ್ಟಿನಲ್ಲಿ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

2011ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ 1,96,006 ಮಂದಿ ಅನಕ್ಷರಸ್ಥರಿದ್ದು, ಇವರಲ್ಲಿ ಪ್ರಸ್ತುತ 1,15,910 ಮಂದಿ ನವ ಸಾಕ್ಷರರಾಗಿದ್ದಾರೆ, ಬಾಕಿ ಉಳಿದಿರುವ 80,093 ಅನಕ್ಷರಸ್ಥರಿಗೂ ಸಂಜೆ ವೇಳೆಯಲ್ಲಿ ದಿನಕ್ಕೆ ಎರಡು ಗಂಟೆಗಳ ಅವಧಿಯಲ್ಲಿ ಶಿಕ್ಷಣ ನೀಡುವ ಮೂಲಕ ಶೀಘ್ರವೇ ಅವರನ್ನು ನವ ಸಾಕ್ಷರರನ್ನಾಗಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಶಾಲೆ, ಅಂಗನವಾಡಿ, ಅನಕ್ಷರಸ್ಥರ ಮನೆ, ಬೋಧಕರ ಮನೆ ಹಾಗೂ ಸಮುದಾಯ ಭವನಗಳಂತಹ ಅನುಕೂಲಕರ ಸ್ಥಳದಲ್ಲಿ ಬೋಧನೆ ಮಾಡಲಾಗುವುದು ಹಾಗೂ ಬಾಳಿಗೆ ಬೆಳಕು ಪುಸ್ತಕದ ಮೂಲಕ ಓದು, ಬರಹ ಹಾಗೂ ಸರಳ ಲೆಕ್ಕಾಚಾರ ಎಂಬ ಮೂರು ವಿಭಾಗಗಳಲ್ಲಿ ಸುಮಾರು 24 ಪಾಠಗಳನ್ನು ಕಲಿಸಿ, ಪರೀಕ್ಷೆ ನಡೆಸಲಾಗುತ್ತದೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಶ್ರೇಣಿ ಸಹಿತ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾಕ್ಷರತಾ ಪ್ರಮಾಣ ವಚನ ಸ್ವೀಕರಿಸಲಾಯಿತು.

‌ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹನುಮಂತಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನಿತಾಲಕ್ಷ್ಮೀ, ದೊಡ್ಡಬಳ್ಳಾಪುರ ತಹಶೀಲ್ದಾರ್ ಶಿವರಾಜ್, ವಿಶ್ವನಾಥಪುರ ಪಬ್ಲಿಕ್ ಶಾಲೆಯ ದೈಹಿಕ ಶಿಕ್ಷಕ ರಮೇಶ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!