ರೈತರು ‌ಬೆಂಕಿ ರೋಗ ಬಾಧೆಯ ಹತೋಟಿಗೆ ಕ್ರಮಗಳನ್ನು ಕೈಗೊಳ್ಳಿ – ಡಾ.ಜಿ.ಎಸ್ ಜಯಸ್ವಾಮಿ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಉತ್ತಮ ಮಳೆಯಾದ ಹಿನ್ನೆಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 51849 ಹೆಕ್ಟರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗುವ ಮೂಲಕ ಬಿತ್ತನೆ ಪ್ರಕ್ರಿಯೆ ಪೂರ್ಣಗೊಂಡಿರುತ್ತದೆ.

ಜಿಲ್ಲೆಯಲ್ಲಿ ರಾಗಿಯಲ್ಲಿ ಕಂಡು ಬಂದಿರುವ ಈ ಸಮಸ್ಯೆಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ. 50%ರ ರಿಯಾಯಿತಿಯಲ್ಲಿ ಸಸ್ಯ ಸಂರಕ್ಷಣೆ ಔಷಧಿಗಳು ಲಭ್ಯವಿದ್ದು, ಜಿಲ್ಲೆಯ ರೈತರು ಸವಲತ್ತುಗಳನ್ನು ಪಡೆಯುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಡಾ.ಜಿ.ಎಸ್ ಜಯಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳವಣಿಗೆ ಹಂತದಲ್ಲಿರುವ ರಾಗಿ ಬೆಳೆಯಲ್ಲಿ ಬೆಂಕಿ ರೋಗದ ಬಾಧೆ ಕಂಡು ಬಂದಿದ್ದು, ರಾಗಿ ಬೆಳೆಯ ಎಲೆಗಳ ಮೇಲೆ ಕಂದು ಬಣ್ಣದ ವಜ್ರಾಕಾರದ ಚುಕ್ಕೆಗಳು ಕಾಣಿಸಿಕೊಂಡು, ಅವುಗಳು ಒಂದಕ್ಕೊಂದು ಸೇರಿ ಎಲೆಗಳು ಒಣಗಿದಂತೆ ಕಂಡು ಬಂದಿರುತ್ತದೆ. ರೋಗವನ್ನು ಹತೋಟಿ ವಹಿಸದಿದ್ದಲ್ಲಿ ಇಳುಕಿನ ಮೇಲೆ ಕಂದು ಬಣ್ಣ ಕಾಣಿಸಿಕೊಂಡು ತೆನೆ ಇಳುಕು ಕಾಳು ಕಟ್ಟದೆ ಇಳುವರಿ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಬೆಂಕಿ ರೋಗದ ಬಾಧೆಯನ್ನು ಹತೋಟಿಗೆ ತರಲು ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಯಾದ ಡಾ.ಮಂಜುನಾಥ್ ಅವರ ಸಲಹೆಯಂತೆ ಶೀಲಿಂಧ್ರನಾಶಕಗಳಾದ ಮ್ಯಾಂಕೋಜೆಬ್ 75 ಡಬ್ಲ್ಯೂಪಿ 2 ಗ್ರಾಂ ಅಥವಾ ಕಾರ್ಬೆಂಡಜಿA 50 ಡಬ್ಲ್ಯೂಪಿ 1 ಗ್ರಾಂ ಅಥವಾ ಜೈನೆಬ್ 75 ಡಬ್ಲ್ಯೂಪಿ 2.5 ಗ್ರಾಂ ಅಥವಾ ಕಾರ್ಬೆಂಡಜಿA 12% + ಮ್ಯಾಂಕೋಜೆಬ್ 63% 1 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಮತ್ತು ಸಾಧ್ಯವಾದಷ್ಟು ಬೆಳಿಗ್ಗೆ 12.00 ಗಂಟೆಗೂ ಮುನ್ನ ಅಥವಾ ಮಧ್ಯಾಹ್ನ 3.00 ಗಂಟೆಯ ನಂತರ ಸಿಂಪರಣೆಯನ್ನು ಕೈಗೊಳ್ಳಬೇಕು ಹಾಗೂ ಸಿಂಪಡಿಸುವ ಸಂದರ್ಭದಲ್ಲಿ ಸಿಂಪರಣಾ ದ್ರಾವಣವು ಅತಿ ಸೂಕ್ಷ್ಮ ಹನಿಯ ರೂಪದಲ್ಲಿ ಬೀಳುವ ನೋಜಲ್‌ಗಳನ್ನು ರೈತರು ಬಳಸಬೇಕು.(ಸಂಗ್ರಹ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!