ಬೆಂ.ಗ್ರಾ.ಜಿಲ್ಲೆ: ಗಣೇಶ ಚತುರ್ಥಿಯನ್ನು ಇದೇ ಸೆಪ್ಟೆಂಬರ್ 10ರಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಪ್ರಾಣಿ ವಧೆ ಮಾಡುವುದನ್ನು ಅಥವಾ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಬೇಕೆಂದು ಹಿಂದೂ ಪರ ಸಂಘಟನೆಗಳು ಒತ್ತಾಯಿಸಿವೆ.
ಗೃಹ ಸಚಿವರ ಭರವಸೆ ಹುಸಿ: ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರು, ಜಿಲ್ಲೆಯಲ್ಲಿ ಮಾಂಸ ಮಾರಾಟ ನಿಷೇಧ ಹೇರದಿರುವುದು ಖಂಡನೀಯ, ಮಾಂಸ ಮಾರಾಟ ನಿಷೇಧದ ಕುರಿತು ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಲಾಗಿತ್ತು, ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೂ ಯಾವುದೇ ಆದೇಶ ಬಂದಿಲ್ಲವೆಂದು ಭಜರಂಗದಳದ ಜಿಲ್ಲಾ ಸಂಚಾಲಕ ಮಧುಬೇಗಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಹು ಸಂಖ್ಯಾತರ ಧಾರ್ಮಿಕ ಭಾವನೆಗೆ ಮನ್ನಣೆ ನೀಡಿ: ಹಿಂದು ಪರ ಪಕ್ಷ, ಹಿಂದುಗಳ ಸರ್ಕಾರ ಎನ್ನುವ ಬಿಜೆಪಿ ಪಕ್ಷವು ಹಿಂದುಗಳ ಹಬ್ಬದ ಆಚರಣೆಗೆ ಷರತ್ತು ವಿಧಿಸಲು ಕ್ರಮಕೈಗೊಳ್ಳುತ್ತದೆಯೇ ಹೊರತು, ಹಬ್ಬದ ದಿನಗಳಂದು ಮಾಂಸ ನಿಷೇಧ ಮಾಡಬೇಕೆಂಬ ಕನಿಷ್ಠ ಕಾಳಜಿ ತೋರದೆ ಇರುವುದು ವಿಪರ್ಯಾಸ. ಜಿಲ್ಲಾಧಿಕಾರಿಗಳು ಕೂಡಲೇ
ಎರಡ ದಿನಗಳ ಕಾಲ ಮಾಂಸ ಮಾರಾಟಕ್ಕೆ ನಿಷೇಧ ಮಾಡುವ ಮೂಲಕ ಬಹುಸಂಖ್ಯಾತ ಹಿಂದುಗಳು ಧಾರ್ಮಿಕ ಭಾವನೆಗೆ ಮನ್ನಣೆ ನೀಡಬೇಕೆಂದು ಹಿಂದು ಜಾಗರಣಾ ವೇದಿಕೆ ಜಿಲ್ಲಾ ವಿಭಾಗೀಯ ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆನಂದ್ ಒತ್ತಾಯಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..