ಬೆಂ.ಗ್ರಾ.ಜಿಲ್ಲೆ: ಸರ್ಕಾರದ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಸರ್ಕಾರದ ಭೂಮಿಗಳನ್ನು ಮರಳಿ ವಶಪಡಿಸಿಕೊಳ್ಳುವ ಮೂಲಕ, ಸರ್ಕಾರಿ ಭೂಮಿ ಒತ್ತುವರಿಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕೆನ್ನುವ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರ ಸೂಚನೆಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕೆಂದು ಆರೂಢಿ ಗ್ರಾಮಪಂಚಾಯಿತಿ ಮಾಜಿ ಸದಸ್ಯ ರಾಜ್ ಕುಮಾರ್ ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಸರ್ಕಾರಿ ಭೂಮಿ ಒತ್ತುವರಿಯಾಗದಂತೆ ಕ್ರಮವಹಿಸಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಕುರಿತಂತೆ, ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಆರೂಢಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಸರ್ವೆ ನಂಬರ್ 424 ಹಾಗೂ ಬನವತಿ ಸರ್ವೆ ನಂಬರ್ 292 ಮತ್ತು 120 ನಂಬರ್ ಗೆ ಸೇರಿದ ಬೆಟ್ಟದಲ್ಲಿನ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ನೆಲಸಮಗೊಳಿಸುತ್ತಿದ್ದಾರೆ. ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ.
ಅಲ್ಲದೆ ಸರ್ಕಾರಿ ಜಮೀನು ಉಳಿಸುವಂತೆ ಸೋಮವಾರ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆ ಉಂಟಾಗಿದ್ದು, ಸರ್ಕಾರಿ ಭೂಮಿ ಒತ್ತುವರಿಯಾಗದಂತೆ ಕ್ರಮವಹಿಸಬೇಕೆಂಬ ಪ್ರಾದೇಶಿಕ ಆಯುಕ್ತ ಸೂಚನೆಯನ್ನು ಅಧಿಕಾರಿಗಳು ನಿಜಕ್ಕೂ ಪಾಲಿಸುವರೆ ಎಂದು ರಾಜ್ ಕುಮಾರ್ ಪ್ರಶ್ನಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..