ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಂಡಿರುವ ಪ್ರಯುಕ್ತ ಜಿಲ್ಲಾಧಿಕಾರಿ ಆರ್. ಲತಾ ಅವರು ಬಾಗೇಪಲ್ಲಿ ತಾಲ್ಲೂಕಿನ ಚಿನ್ನಓಬೇಗಾರಹಳ್ಳಿ, ಪೂಲನಾಯಕನಹಳ್ಳಿ ಮತ್ತು ದುಗ್ಗಿನಾಯಕನಹಳ್ಳಿ ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಕೋವಿಡ್ ಲಸಿಕಾಕರಣದಿಂದಾಗುವ ಪ್ರಯೋಜನಗಳ ಬಗ್ಗೆ ಹಾಗೂ ಅದರ ಮಹತ್ವದ ಬಗ್ಗೆ ತಿಳಿಸಿ ಮನವೊಲಿಸುವ ಮೂಲಕ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಇಂದಿರಾ ಆರ್ ಕಬಾಡೆ, ಬಾಗೇಪಲ್ಲಿ ತಾಲ್ಲೂಕು ತಹಸೀಲ್ದಾರ್ ದಿವಾಕರ್, ಬಾಗೇಪಲ್ಲಿ ತಾಲೂಕಿನ ಆರೋಗ್ಯಾಧಿಕಾರಿ ಸತ್ಯನಾರಾಯಣರೆಡ್ಡಿ, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಮತ್ತು ಆಶಾ, ಆರೋಗ್ಯ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..