ಎಲ್ಲೆಡೆ ಶ್ರದ್ಧಾಭಕ್ತಿಯ ಗಣೇಶ ಚತುರ್ಥಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನಾದ್ಯಂತ ಮನೆಗಳಲ್ಲಿ ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ನೇತೃತ್ವದಲ್ಲಿ  ಗಣೇಶೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಸರ್ಕಾರದ ಮಾರ್ಗಸೂಚಿ ಪ್ರಕಾರ ನಾಲ್ಕು ಅಡಿಗಿಂತಲೂ ಹೆಚ್ಚು ಎತ್ತರದ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅವಕಾಶವಿಲ್ಲದಿರುವುದರಿಂದ  ಸಾಕಷ್ಟು ಸಂಘಟನೆಗಳು ಎಲ್ಲೆಡೆ ಪುಟ್ಟ ಗಣಪನ ಮೂರ್ತಿಗಳನ್ನು ‍ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದವು.

ದೇವರಾಜನಗರದ ಸರ್ವಸಿದ್ದಿವಿನಾಯ ಗೆಳೆಯರ ಬಳಗ, ಬೆಸ್ತರ ಪೇಟೆಯಲ್ಲಿ ಬಜರಂಗದಳದ ಸ್ವಾಮಿ ವಿವೇಕಾನಂದ ಘಟಕ, ಭುವನೇಶ್ವರಿನಗರದ ಶ್ರೀ ನವಜ್ಯೋತಿ ವಿನಾಯಕ ಗೆಳೆಯರ ಬಳಗ, ತೇರಿನಬೀದಿಯ ಶ್ರೀ ವಿನಾಯಕ ಮಿತ್ರ ಬಳಗ ( ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಂದ್ರ ಶೇಖರ್ ಆಜಾದ್ ಘಟಕ ), ಕನಕದಾಸ ರಸ್ತೆಯ ಶ್ರೀ ಗೌರಿಪುತ್ರ ಗಜಾನನ ಗೆಳೆಯರ ಬಳಗ,‌ ದೊಡ್ಡತುಮಕೂರಿನ ರೇಣುಕಾಯಲ್ಲಮ್ಮ ವಿನಾಯಕ ಬಳಗ, ಗುಂಡಮಗೆರೆಯ ವಾಲ್ಕೀಕಿ ಯುವರ ಸಂಘ, ಮಾರಿಮುತ್ತು ಯುವಕರ ಸಂಘ ಸೇರಿದಂತೆ ವಿವಿಧ ಸಮಿತಿಗಳು ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.

ಇಲ್ಲದ ಅಬ್ಬರ: ಗಣಪತಿ ತರುವ ವೇಳೆ ಯಾವುದೇ ಡಿಜೆ ಸದ್ದು, ಮೈಕ್‌ಗಳ ಅಬ್ಬರ ಕಂಡುಬರಲಿಲ್ಲ. ಶಾಮಿಯಾನ, ಸಮುದಾಯ ಭವನ, ಸೇರಿ ಖಾಲಿ ಜಾಗದಲ್ಲಿ ಸಣ್ಣ ಪೆಂಡಾಲ್ ಹಾಕಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು.

ಪ್ರತಿ ಬಾರಿ ಪೆಂಡಾಲ್‌ಗೆ ಅತಿ ಹೆಚ್ಚು ಹಣ ಹಾಕಿ ಅಲಂಕಾರ ಮಾಡುತ್ತಿದ್ದವರು ಈ ಬಾರಿ ಯಾವುದೇ ಅಲಂಕಾರ ಮಾಡಿರಲಿಲ್ಲ. ಸೀರಿಯಲ್ ಸೆಟ್, ಫೋಕಸ್ ಲೈಟಿಂಗ್ಸ್, ಪೆಂಡಾಲ್‌ಗೆ ವಿಜೃಂಭಣೆ ಅಲಂಕಾರ ಇದ್ಯಾವುದು ಇರಲಿಲ್ಲ. ಗಣಪತಿ ತರುವ ವೇಳೆ ಕಡಿಮೆ ಸಂಖ್ಯೆಯಲ್ಲಿ ಯುವಕರು ಪಾಲ್ಗೊಂಡಿದ್ದರು. ಹಿಂದಿನ ವರ್ಷದಂತೆ ಪ್ರಸಾದ ವಿನಿಯೋಗ ಇರಲಿಲ್ಲ.  

ದೊಡ್ಡಬಳ್ಳಾಪುರ ನಗರಸಭೆಯಲ್ಲಿ 40, ಕಸಬಾ ಮತ್ತು ತೂಬಗೆರೆ ವ್ಯಾಪ್ತಿಯಲ್ಲಿ 96, ದೊಡ್ಡಬೆಳವಂಗಲ ಮತ್ತು ಮಧುರೆ ವ್ಯಾಪ್ತಿಯಲ್ಲಿ 50 ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 20 ಸೇರಿದಂತೆ ಒಟ್ಟು 206 ಗಣೇಶೋತ್ಸವಗಳಿಗೆ ಅನುಮತಿ ನೀಡಲಾಗಿತ್ತು.

ನಗರದ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯದ ಸಮೀಪದ ನಾಗರಕೆರೆ ಅಂಚಿನಲ್ಲಿ ಸಾಮೂಹಿಕ ವಿಸರ್ಜನೆಗಾಗಿ ನಗರಸಭೆಯಿಂದ ವಿಶೇಷ ಹೊಂಡದ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿ ನಗರಸಭೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಜರಿದ್ದು, ಗಣೇಶ ಮೂರ್ತಿ ವಿಸರ್ಜನೆ ಮಾಡಲು ಸಹಕರಿಸುತ್ತಿದ್ದಾರೆ. 

ಇದರೊಂದಿಗೆ ಮೂರು ಡ್ರಮ್‍ಗಳನ್ನು ಒಳಗೊಂಡ ನಾಲ್ಕು ಟ್ರ್ಯಾಕ್ಟರ್‍ಗಳು ನಗರದ ವಿವಿದೆಡೆ ಸಂಚರಿಸುತ್ತಿದ್ದು, ಮನೆಯಲ್ಲಿ ಪ್ರತಿಷ್ಟಾಪಿಸುವ ಗಣೇಶ ಮೂರ್ತಿಗಳನ್ನು ಸಂಚಾರಿ ವಾಹನಗಳಲ್ಲಿಯೇ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂ.ಎಸ್.ಜಿ.ಪಿ‌ (MSGP) ಕಸ ವಿಲೇವಾರಿ ಘಟಕಕ್ಕೆ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಿಂದ ಕಸ ತುಂಬಿಕೊಂಡು‌ ಹೆಚ್ಚುವರಿ ಲಾರಿಗಳು ಬರುತ್ತವೆ ಎಂಬ ಆತಂಕದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ತಾಲೂಕಿನ ದೊಡ್ಡಮಂಕಲಾಳ

[ccc_my_favorite_select_button post_id="119498"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!