ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಈ ಬಾರಿ ಕೊವಿಡ್-19 ಹಿನ್ನಲೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲು ಸಿದ್ದತೆ ನಡೆಸಲಾಗುತ್ತಿದ್ದು, ಸ್ಥಳೀಯ ಆಡಳಿತಗಳು ಗಣೇಶೋತ್ಸವದ ಮೇಲೆ ನಿಗಾ ವಹಿಸಿವೆ.
ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗಾಗಿ ಪೊಲೀಸ್ ಇಲಾಖೆ ಹಾಗೂ ನಗರಸಭೆಯಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಈ ಬಾರಿಯೂ ಡಿ.ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯದ ಸಮೀಪದ ನಾಗರಕೆರೆ ಅಂಚಿನಲ್ಲಿ ಸಾಮೂಹಿಕ ವಿಸರ್ಜನೆಗಾಗಿ ನಗರಸಭೆಯಿಂದ ವಿಶೇಷ ಹೊಂಡದ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ನಗರಸಭೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಜರಿದ್ದು, ಗಣೇಶ ಮೂರ್ತಿ ವಿಸರ್ಜನೆ ಮಾಡಲು ಸಹಕರಿಸಲಿದ್ದಾರೆ.
ಇದರೊಂದಿಗೆ ಮೂರು ಡ್ರಮ್‍ಗಳನ್ನು ಒಳಗೊಂಡ ನಾಲ್ಕು ಟ್ರ್ಯಾಕ್ಟರ್‍ಗಳು ನಗರದ ವಿವಿದೆಡೆ ಸಂಚರಿಸಲಿದ್ದು, ಮನೆಯಲ್ಲಿ ಪ್ರತಿಷ್ಟಾಪಿಸುವ ಗಣೇಶ ಮೂರ್ತಿಗಳನ್ನು ಸಂಚಾರಿ ವಾಹನಗಳಲ್ಲಿಯೇ ವಿಸರ್ಜನೆ ಮಾಡಬಹುದಾಗಿದೆ.
ಗಣೇಶೋತ್ಸವದಲ್ಲಿ ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು.ಗಗನಾರ್ಯ ಮಠದ ಸಮೀಪವಿರುವ ಕಲ್ಯಾಣಿ, ಮೊದಲಾಗಿ ಯಾವುದೇ ಕೆರೆ ಕುಂಟೆಗಳಲ್ಲಿ ವಿಸರ್ಜನೆ ಮಾಡಬಾರದು. ನಗರಸಭೆ ವ್ಯವಸ್ಥೆ ಮಾಡಿರುವ ನಿಗದಿತ ಸ್ಥಳದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು.
ವಿಸರ್ಜನೆಯ ಸಮಯದಲ್ಲಿ ಹೂವು, ಬಾಳೆಕಂದು ಮೊದಲಾದ ಅನುಪಯುಕ್ತ ವಸ್ತುಗಳನ್ನು ಬೇರ್ಪಡಿಸಬೇಕು. ಯಾವುದೇ ರೀತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬಾರದು. ಕೆರೆ ಕುಂಟೆ ಕಲ್ಯಾಣಿಗಳನ್ನು ಪರಿಸರಸ್ನೇಹಿಯಾಗಿ ಬಳಸಿ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..