ಬೆಂಗಳೂರು: ರಾಜ್ಯಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೇ ದಿನದಂದೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪ್ಯಾನ್ ಇಂಡಿಯಾ ಹೊಸ ಸಿನಿಮಾದ ಹೆಸರು ಘೋಷಣೆ ಮಾಡಲಾಗಿದ್ದು, ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ದರ್ಶನ್ ಅಭಿನಯಿಸುತ್ತಿರುವ 55ನೇ ಚಿತ್ರ ಇದಾಗಿದ್ದು, ಈ ಸಿನಿಮಾಕ್ಕೆ ‘ಕ್ರಾಂತಿ’ ಎಂದು ಟೈಟಲ್ ಇಡಲಾಗಿದೆ. ಇಂದು ಬಿಡುಗಡೆ ಮಾಡಲಾಗಿರುವ ಪೋಸ್ಟರ್‌ನಲ್ಲಿ ದರ್ಶನ್ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಗಣೇಶ ಹಬ್ಬದ ಶುಭಾಶಯಗಳು ಎಂಬ ಪದಗಳು ಸೇರಿದಂತೆ ಇತರ ಪದಗಳು, ಹೆಲಿಕಾಪ್ಟರ್, ಕಟ್ಟಡಗಳನ್ನು ಹಾಗೂ LEARN TO FIGHT ALONE ( ಒಬ್ಬನೇ ಹೋರಾಡುವುದ ಕಲಿ) ಈ ಪೋಸ್ಟರ್‌ನಲ್ಲಿ ನೋಡಬಹುದಾಗಿದೆ.
ಪೋಸ್ಟರ್ ನೋಡಿದರೆ ಇದೊಂದು ಪಕ್ಕಾ ಆಕ್ಷನ್ ಸಿನಿಮಾ ಎಂದು ಹೇಳಬಹುದಾಗಿದೆ.
ಈ ಹಿಂದೆ ದರ್ಶನ್ ನಟನೆಯ ‘ಯಜಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ಶೈಲಜಾ ನಾಗ್ ಮತ್ತು ಬಿ ಸುರೇಶ್ ಅವರೇ ಈ ಚಿತ್ರವನ್ನೂ ನಿರ್ಮಿಸುತ್ತಿದ್ದಾರೆ. ಸಂಗೀತ ನಿರ್ದೇಶಕ ಹರಿಕೃಷ್ಣ ಅವರು ‘ಕ್ರಾಂತಿ’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿ.ಹರಿಕೃಷ್ಣ ಅವರಿಗೆ ನಿರ್ದೇಶಕರಾಗಿ ಇದು ಎರಡನೇ ಸಿನಿಮಾ ಆಗಿದೆ.
ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಕ್ರಾಂತಿ’ ಮೂಡಿ ಬರಲಿದೆ. ಕೊನೆಯದಾಗಿ ‘ರಾಬರ್ಟ್’ ಸಿನಿಮಾ ಮೂಲಕ ಡಿಬಾಸ್ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಇದೀಗ ‘ಯಜಮಾನ’ ಚಿತ್ರತಂಡ ಮತ್ತೆ ದರ್ಶನ್ ಜೊತೆ ‘ಕ್ರಾಂತಿ’ ಸಿನಿಮಾ ಮಾಡುತ್ತಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..