ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ವಿಗ್ರಹವನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವ ಆರೋಪ ಕೇಳಿ ಬಂದಿದೆ.
16ನೇ ವಾರ್ಡಿನ ಕೋಟೆ ರಸ್ತೆಯಲ್ಲಿ ಬಾಲ ಬೆನಕ ಯುವಕರ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ, ಗಣೇಶ ಮೂರ್ತಿಯ ಶಿರ ಹಾಗೂ ಕೈಯನ್ನು ಭಗ್ನಗೊಳಿಸಿರುವ ಕಿಡಿಗೇಡಿಗಳು, ದೇವರ ಮುಂಬಾಗದಲ್ಲಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಘಟನೆ ಕುರಿತಂತೆ ಪರಿಶೀಲನೆ ನಡೆಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..