ಬೆಂಗಳೂರು: ನಂಜನಗೂಡುನ ಐತಿಹಾಸಿಕ ಹಿಂದೂ ದೇವಸ್ಥಾನ ನೆಲಸಮ ಗೊಳಿಸಿರುವ ಕ್ರಮವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ದೇವಸ್ಥಾನ ನೆಲಕ್ಕುರುಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿಹಂಚಿಕೊಂಡಿರುವ ಸಿದ್ದರಾಮಯ್ಯ, ಸ್ಥಳೀಯ ಜನರ ಜೊತೆ ಸಮಾಲೋಚನೆ ನಡೆಸದೆ ದೇವಸ್ಥಾನವನ್ನು ಕೆಡವಲಾಗಿದೆ. ಈ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದೆ ಎಂದು ಟೀಕಿಸಿದ್ದಾರೆ.
ದೇವಸ್ಥಾನ ತೆರವು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಸರಿಯಾದ ಕ್ರಮವನ್ನು ಅನುಸರಿಸಿಲ್ಲ ಎಂದು ಆರೋಪಿಸಿರುವ ಸಿದ್ದರಾಮಯ್ಯ, ಒಂದು ವೇಳೆ ದೇವಸ್ಥಾನವನ್ನು ತೆರವುಗೊಳಿಸುವುದು ಅನಿವಾರ್ಯವಾಗಿದ್ದರೆ ಅದಕ್ಕೆ ಪರ್ಯಾಯ ಸ್ಥಳವನ್ನು ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..