ಬೆಂಗಳೂರು: 1893ರ ಸೆಪ್ಟೆಂಬರ್ 11ರಂದು ಅಮೇರಿಕಾದ ಚಿಕಾಗೊ ನಗರದಲ್ಲಿ ನಡೆದ ಧರ್ಮ ಸಂಸತ್‌ನಲ್ಲಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ತಮ್ಮ ಐತಿಹಾಸಿಕ ಭಾಷಣ ಮಾಡಿ ಇಂದಿಗೆ 128 ವರ್ಷಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.
ಸರಣಿ ಸಂದೇಶ ಬರೆದಿರುವ ಅವರು, ವಿಭಿನ್ನ ಜಾತಿ, ಮತಗಳ ಮಾನವ ಸಂಕುಲವನ್ನು ಒಂದೇ ಗೂಡಿನಲ್ಲಿ ಪೋಷಿಸುತ್ತಿರುವ ಭಾರತವನ್ನು ಪ್ರತಿನಿಧಿಸಿದ್ದ ವಿವೇಕಾನಂದರ ಅಂದಿನ ನುಡಿಮುತ್ತುಗಳು ಭಾರತೀಯರಲ್ಲಿ ಸ್ವಾಭಿಮಾನ, ಸಹಿಷ್ಣುತೆಯ ಪ್ರಜ್ಞೆಯನ್ನು ಬಡಿದೆಬ್ಬಿಸಿದ್ದವು.
ನಮ್ಮೆಲ್ಲರ ಆತ್ಮಪ್ರಜ್ಞೆಯಾದ ಸ್ವಾಮಿ ವಿವೇಕಾನಂದರಿಗೆ ಶಿರ ಸಾಷ್ಟಾಂಗ ನಮಸ್ಕಾರಗಳು ಹಾಗೂ ನಾವೆಲ್ಲರೂ ಆ ಮಹಾಪುರುಷನ ಹೆಜ್ಜೆಗಳಲ್ಲಿ ಮುನ್ನಡೆಯೋಣ ಎಂದು ಕರೆ ನೀಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..