HL Web Exclusive: ರೈತರ ಕಾಡುತ್ತಿದ್ದ, ತೆಂಗಿನ ಗರಿ ಕಳ್ಳರ ಬಂಧಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು

ದೊಡ್ಡಬಳ್ಳಾಪುರ: ರಾತ್ರೋ ರಾತ್ರಿ ತೆಂಗಿನ ತೋಟಗಳಿಗೆ ನುಗ್ಗಿ, ಗರಿಗಳ ಕತ್ತರಿಸಿಕೊಂಡು ಪರಾರಿಯಾಗುವ ಮೂಲಕ, ಕಳೆದ ಹಲವು ತಿಂಗಳಿಂದ ರೈತರ ಕಾಡುತ್ತಿದ್ದ ಕಳ್ಳರನ್ನು ಎಡೆಮುರಿ ಕಟ್ಟುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಡಿವೈಎಸ್ಪಿ ಟಿ.ರಂಗಪ್ಪ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು‌ ಮೂಲಗಳು ಹರಿತಲೇಖನಿಗೆ ತಿಳಿಸಿವೆ.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಮೂಲದ ಇಬ್ಬರನ್ನು ಬಂಧಿಸಿರುವ ಪೊಲೀಸರು ಬೊಲೆರೋ ಸರಕು ಸಾಗಣೆ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಬೆಂಗಳೂರು ನಗರ ಹಾಗೂ ಮತ್ತಿತರ ಕಡೆ ಆಲಂಕಾರಿಕ ಬಳಕೆಗೆ ತೆಂಗಿನ ಗರಿಯ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವನಾಥಪುರ, ಚನ್ನರಾಯಪಟ್ಟಣ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿನ ತೋಟಗಳಿಗೆ  ರಾತ್ರಿ ವೇಳೆ ನುಗ್ಗುತ್ತಿದ್ದ ಕಳ್ಳರು ಗರಿಗಳನ್ನು ಕದ್ದು ಪರಾರಿಯಾಗುತ್ತಿದ್ದರು.

ತೆಂಗಿನ ಗರಿಗಳ ಕದಿಯುವಿಕೆ ಆರಂಭಿಕ ದಿನಗಳಲ್ಲಿ ಸಾಮಾನ್ಯ ಎನಿಸಿದರು, ದಿನ ಕಳೆದಂತೆ ಇವರ ಉಪಟಳ ರೈತರಿಗೆ ತೀವ್ರವಾಗಿ ವಿಶ್ವನಾಥಪುರ, ಚನ್ನರಾಯಪಟ್ಟಣ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗಳಲ್ಲಿ ದೂರು ದಾಖಲಾಗಿತ್ತು ಎನ್ನಲಾಗಿದೆ.

ಈ ಕುರಿತು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!