ದೊಡ್ಡಬಳ್ಳಾಪುರ: ರಾತ್ರೋ ರಾತ್ರಿ ತೆಂಗಿನ ತೋಟಗಳಿಗೆ ನುಗ್ಗಿ, ಗರಿಗಳ ಕತ್ತರಿಸಿಕೊಂಡು ಪರಾರಿಯಾಗುವ ಮೂಲಕ, ಕಳೆದ ಹಲವು ತಿಂಗಳಿಂದ ರೈತರ ಕಾಡುತ್ತಿದ್ದ ಕಳ್ಳರನ್ನು ಎಡೆಮುರಿ ಕಟ್ಟುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಡಿವೈಎಸ್ಪಿ ಟಿ.ರಂಗಪ್ಪ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಮೂಲದ ಇಬ್ಬರನ್ನು ಬಂಧಿಸಿರುವ ಪೊಲೀಸರು ಬೊಲೆರೋ ಸರಕು ಸಾಗಣೆ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.
ಬೆಂಗಳೂರು ನಗರ ಹಾಗೂ ಮತ್ತಿತರ ಕಡೆ ಆಲಂಕಾರಿಕ ಬಳಕೆಗೆ ತೆಂಗಿನ ಗರಿಯ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವನಾಥಪುರ, ಚನ್ನರಾಯಪಟ್ಟಣ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿನ ತೋಟಗಳಿಗೆ ರಾತ್ರಿ ವೇಳೆ ನುಗ್ಗುತ್ತಿದ್ದ ಕಳ್ಳರು ಗರಿಗಳನ್ನು ಕದ್ದು ಪರಾರಿಯಾಗುತ್ತಿದ್ದರು.
ತೆಂಗಿನ ಗರಿಗಳ ಕದಿಯುವಿಕೆ ಆರಂಭಿಕ ದಿನಗಳಲ್ಲಿ ಸಾಮಾನ್ಯ ಎನಿಸಿದರು, ದಿನ ಕಳೆದಂತೆ ಇವರ ಉಪಟಳ ರೈತರಿಗೆ ತೀವ್ರವಾಗಿ ವಿಶ್ವನಾಥಪುರ, ಚನ್ನರಾಯಪಟ್ಟಣ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗಳಲ್ಲಿ ದೂರು ದಾಖಲಾಗಿತ್ತು ಎನ್ನಲಾಗಿದೆ.
ಈ ಕುರಿತು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..