ಮುಜರಾಯಿ ದೇವಾಲಯದ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಜೀವ ವಿಮೆ: ಸಚಿವೆ ಶಶಿಕಲಾ ಅ.ಜೊಲ್ಲೆ

ದೊಡ್ಡಬಳ್ಳಾಪುರ: ಮುಜರಾಯಿ ದೇವಾಲಯದ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಜೀವ ವಿಮೆ ಯೋಜನೆಯನ್ನು ಜಾರಿಗೆ ತರುವ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವೆ ಶಶಿಕಲಾ ಅ.ಜೊಲ್ಲೆ ತಿಳಿಸಿದ್ದಾರೆ.

ತಾಲೂಕಿನ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ, ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಅವರು  ಮಾತನಾಡಿದರು.

ದೇವಾಲಯಗಳ ಸ್ಥಿತಿಗತಿಗಳ ಕುರಿತು,  ಈಗಾಗಲೇ ಧಾರ್ಮಿಕ ದತ್ತಿ ಪರಿಷತ್‍ನ ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ಎ ದರ್ಜೆಯ ದೇವಾಲಯದ ಆದಾಯಗಳ ಕುರಿತು ಮಾಹಿತಿ ಪಡೆಯಲಾಗಿದ್ದು, ಪ್ರತಿ ಜಿಲ್ಲೆಯ ಅಕ್ಕಪಕ್ಕದ ಸಿ.ದರ್ಜೆ ದೇವಾಲಯಗಳನ್ನು ಯಾವ ರೀತಿ ಅಭಿವೃದ್ದಿ ಮಾಡಬಹುದು ಎಂದು ಚರ್ಚೆ ನಡೆಸಲಾಗಿದ್ದು, ಅವೇಷನದ ನಂತರ ರೂಪು ರೇಷೆಗಳನ್ನು ಸಿದ್ದಪಡಿಸಲಾಗುವುದು ಎಂದರು.

ಮುಜರಾಯಿ ಇಲಾಖೆ ವತಿಯಿಂದ ಹಿಂದಿನ ಮುಜರಾಯಿ ಸಚಿವರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಅವರು ಜಾರಿಗೆ ತಂದಿದ್ದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮವಾಗಿದೆ. ಈ ಯೋಜನೆಯನ್ನು  ಕೊವಿಡ್ ಸ್ಥಿತಿಗತಿಗಳನ್ನು ನೋಡಿಕೊಂಡು ಮುಂದುವರೆಸಿಕೊಂಡು ಹೋಗಲಾಗುವುದು ಎಂದರು.

ದೇವಾಲಯಗಳ ಒತ್ತುವರಿ ಜಾಗಗಳನ್ನು ಸರ್ವೆ ಮಾಡಿಸಿ ತೆರವು ಮಾಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಮುಜರಾಯಿ ದೇವಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ಗೋ ಶಾಲೆಗಳನ್ನು ಆರಂಭಿಸುವ ಚಿಂತನೆ ನಡೆಸಲಾಗಿದ್ದು, ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಕೊವಿಡ್ ಹಿನ್ನಲೆಯಲ್ಲಿ ರಾಜ್ಯದ ಹಲವಾರು ದೇವಾಲಯಗಳು ಮುಚ್ಚಿದ್ದು, ದೇವಾಲಯಗಳು ನಷ್ಟ ಅನುಭವಿಸುತ್ತಿವೆ. ಈ ಕುರಿತು ಅಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ದೇವಾಲಯಗಳ ಆದಾಯ ಹೆಚ್ಚಿಸುವ ಕುರಿತು ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು. ಈಗಾಗಲೇ ಕೋವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ ದೇವಾಲಯಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ದೇವಾಲಯಗಳಲ್ಲಿ ಕೊವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಎಂದಿನಂತೆ ದೇವಾಲಯಗಳನ್ನು  ಅವೇಶನದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದೇವಾಲಯಕ್ಕೆ ಆಗಮಿಸಿದ ಸಚಿವೆ ಶಶಿಕಲಾ ಅ. ಜೊಲ್ಲೆ ಹಾಗೂ ಪತಿ ಸಂಸದ ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ ಅವರನ್ನು ದೇವಾಲಯದ ವತಿಯಿಂದ ಸ್ವಾಗತಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ದೇವಾಲಯದ ಆವರಣದಲ್ಲಿನ ಕುಮಾರವನದಲ್ಲಿನ ನಾಗದೇವತೆಗೆ ಜೊಲ್ಲೆ ದಂಪತಿಗಳು ಹಾಲೆರೆದು ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವೆ ಶಶಿಕಲಾ ಅ. ಜೊಲ್ಲೆಯವರ ಪತಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯ ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ, ರಾಯ್ ಬಾಗ್ ವಿಧಾನಸಭಾ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ, ಮುಜರಾಯಿ ತಹಶೀಲ್ದಾರ್ ಜಿ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಕಾರಿ ಎನ್.ಕೃಷ್ಣಪ್ಪ, ಅೀಕ್ಷಕ ರಘು ಉಚ್ಚಪ್ಪ,  ಪ್ರಧಾನ ಅರ್ಚಕ ಸುಬ್ರಹ್ಮಣ್ಯ, ಮುಜರಾಯಿ ಎ.ಸಿ  ನಾರಾಯಣ ಸ್ವಾಮಿ,  ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ ಹನುಮಂತರಾಯಪ್ಪ, ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಘಟಕ ಅಧ್ಯಕ್ಷ ಹುಲಿಕಲ್ ನಟರಾಜ್, ತಾಲೂಕು ಅರ್ಚಕರ ಮತ್ತು ಆಗಮಿಕರ ಸಂಘದ ಅಧ್ಯಕ್ಷ ಶ್ರೀನಿವಾಸ ರಾಘವನ್  ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]