ದೊಡ್ಡಬಳ್ಳಾಪುರ: ಮುಜರಾಯಿ ದೇವಾಲಯದ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಜೀವ ವಿಮೆ ಯೋಜನೆಯನ್ನು ಜಾರಿಗೆ ತರುವ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವೆ ಶಶಿಕಲಾ ಅ.ಜೊಲ್ಲೆ ತಿಳಿಸಿದ್ದಾರೆ.
ತಾಲೂಕಿನ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ, ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದೇವಾಲಯಗಳ ಸ್ಥಿತಿಗತಿಗಳ ಕುರಿತು, ಈಗಾಗಲೇ ಧಾರ್ಮಿಕ ದತ್ತಿ ಪರಿಷತ್‍ನ ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ಎ ದರ್ಜೆಯ ದೇವಾಲಯದ ಆದಾಯಗಳ ಕುರಿತು ಮಾಹಿತಿ ಪಡೆಯಲಾಗಿದ್ದು, ಪ್ರತಿ ಜಿಲ್ಲೆಯ ಅಕ್ಕಪಕ್ಕದ ಸಿ.ದರ್ಜೆ ದೇವಾಲಯಗಳನ್ನು ಯಾವ ರೀತಿ ಅಭಿವೃದ್ದಿ ಮಾಡಬಹುದು ಎಂದು ಚರ್ಚೆ ನಡೆಸಲಾಗಿದ್ದು, ಅವೇಷನದ ನಂತರ ರೂಪು ರೇಷೆಗಳನ್ನು ಸಿದ್ದಪಡಿಸಲಾಗುವುದು ಎಂದರು.
ಮುಜರಾಯಿ ಇಲಾಖೆ ವತಿಯಿಂದ ಹಿಂದಿನ ಮುಜರಾಯಿ ಸಚಿವರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಅವರು ಜಾರಿಗೆ ತಂದಿದ್ದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮವಾಗಿದೆ. ಈ ಯೋಜನೆಯನ್ನು ಕೊವಿಡ್ ಸ್ಥಿತಿಗತಿಗಳನ್ನು ನೋಡಿಕೊಂಡು ಮುಂದುವರೆಸಿಕೊಂಡು ಹೋಗಲಾಗುವುದು ಎಂದರು.
ದೇವಾಲಯಗಳ ಒತ್ತುವರಿ ಜಾಗಗಳನ್ನು ಸರ್ವೆ ಮಾಡಿಸಿ ತೆರವು ಮಾಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಮುಜರಾಯಿ ದೇವಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ಗೋ ಶಾಲೆಗಳನ್ನು ಆರಂಭಿಸುವ ಚಿಂತನೆ ನಡೆಸಲಾಗಿದ್ದು, ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಕೊವಿಡ್ ಹಿನ್ನಲೆಯಲ್ಲಿ ರಾಜ್ಯದ ಹಲವಾರು ದೇವಾಲಯಗಳು ಮುಚ್ಚಿದ್ದು, ದೇವಾಲಯಗಳು ನಷ್ಟ ಅನುಭವಿಸುತ್ತಿವೆ. ಈ ಕುರಿತು ಅಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ದೇವಾಲಯಗಳ ಆದಾಯ ಹೆಚ್ಚಿಸುವ ಕುರಿತು ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು. ಈಗಾಗಲೇ ಕೋವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ ದೇವಾಲಯಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ದೇವಾಲಯಗಳಲ್ಲಿ ಕೊವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಎಂದಿನಂತೆ ದೇವಾಲಯಗಳನ್ನು ಅವೇಶನದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ದೇವಾಲಯಕ್ಕೆ ಆಗಮಿಸಿದ ಸಚಿವೆ ಶಶಿಕಲಾ ಅ. ಜೊಲ್ಲೆ ಹಾಗೂ ಪತಿ ಸಂಸದ ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ ಅವರನ್ನು ದೇವಾಲಯದ ವತಿಯಿಂದ ಸ್ವಾಗತಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ದೇವಾಲಯದ ಆವರಣದಲ್ಲಿನ ಕುಮಾರವನದಲ್ಲಿನ ನಾಗದೇವತೆಗೆ ಜೊಲ್ಲೆ ದಂಪತಿಗಳು ಹಾಲೆರೆದು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವೆ ಶಶಿಕಲಾ ಅ. ಜೊಲ್ಲೆಯವರ ಪತಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯ ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ, ರಾಯ್ ಬಾಗ್ ವಿಧಾನಸಭಾ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ, ಮುಜರಾಯಿ ತಹಶೀಲ್ದಾರ್ ಜಿ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಕಾರಿ ಎನ್.ಕೃಷ್ಣಪ್ಪ, ಅೀಕ್ಷಕ ರಘು ಉಚ್ಚಪ್ಪ, ಪ್ರಧಾನ ಅರ್ಚಕ ಸುಬ್ರಹ್ಮಣ್ಯ, ಮುಜರಾಯಿ ಎ.ಸಿ ನಾರಾಯಣ ಸ್ವಾಮಿ, ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ ಹನುಮಂತರಾಯಪ್ಪ, ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ಘಟಕ ಅಧ್ಯಕ್ಷ ಹುಲಿಕಲ್ ನಟರಾಜ್, ತಾಲೂಕು ಅರ್ಚಕರ ಮತ್ತು ಆಗಮಿಕರ ಸಂಘದ ಅಧ್ಯಕ್ಷ ಶ್ರೀನಿವಾಸ ರಾಘವನ್ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..