ಬೆಂಗಳೂರು: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರು ಆಕಸ್ಮಾತಾಗಿ ಗೆದ್ದರೂ ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿರುವ ಕಾರಣದಿಂದ ಸಿಎಂ ಬೊಮ್ಮಾಯಿ ಜೊತೆ ಬಿಎಸ್ ವೈ ಮಾತುಕತೆ ನಡೆಸಿದರು. ಯಡಿಯೂರಪ್ಪನವರು ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಇದೇ ಮೊದಲ ಬಾರಿಗೆ ಅಧಿವೇಶನದಲ್ಲಿ ಭಾಗವಹಿಸಿದ್ದಾರೆ.
ಬೊಮ್ಮಾಯಿ ಅವರು ಸಿಎಂ ಆಗಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಎಲ್ಲಾ ರೀತಿಯ ಸಹಕಾರ ಕೊಡಲು ಸಿದ್ದನಿದ್ದೇನೆ. ಬರುವ ದಿನಗಳಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇವೆ. ರಾಜ್ಯದ್ಯಾಂತ ಪ್ರವಾಸ ಮಾಡಿ ಬಿಜೆಪಿ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ. ನಾವು ನಮ್ಮ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡ್ತೇವೆ ಎಂದು ಬಿಎಸ್ ವೈ ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..