ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ತಾಲೂಕಿನ ದೊಡ್ಡತುಮಕೂರು ವೃತ್ತದ ವತಿಯಿಂದ ಬಾಶೆಟ್ಟಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಪೋಷಣ್ ಅಭಿಯಾನ ಮಾಸಾಚರಣೆಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಆಯುಕ್ತ ಮುನಿರಾಜು ನೆರವೇರಿಸಿದರು.
ಈ ವೇಳೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಭಾರ ಉಪನಿರ್ದೇಶಕಿ ಹಾಗೂ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನಿತಾಲಕ್ಷ್ಮೀ ಮಾತನಾಡಿ, ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಬೇಕು. ಪುರಾತನ ಕಾಲದಿಂದಲೂ ನಮ್ಮ ಅಜ್ಜಿಯಂದಿರು ಗರ್ಭಿಣಿಯರ, ಬಾಣಂತಿಯರು ಯಾವ ರೀತಿಯಾಗಿ ಸಮತೋಲನ ನೀಡಿ ಆರೈಕೆ ಮಾಡಬೇಕೆಂದು ನಮಗೆ ಹೇಳಿಕೊಡುತ್ತಿದ್ದರು. ಆದರೆ, ಈಗ ಮತ್ತಷ್ಟು ಅರಿವು ಬೇಕಾಗಿರುವುದರಿಂದ ಸರಕಾರ ಈ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಈ ಯೋಜನೆಯಡಿ ಗರ್ಭಧಾರಣೆಯಿಂದ ಹಿಡಿದು ಶಿಶು ಮತ್ತು ತಾಯಂದಿರು 1000 ದಿನಗಳ ಕಾಲ ಉತ್ತಮ ಪೌಷ್ಠಿಕ ಆಹಾರ ಸೇವನೆ ಮಾಡುವುದು. ರಕ್ತ ಹೀನತೆ, ಅತಿಸಾರ ಭೇದಿ ತಡೆಗಟ್ಟುವುದು, ಪೌಷ್ಟಿಕ ಆಹಾರ ಪೂರೈಕೆ ಮಾಡುವುದರ ಮೂಲಕ ತಾಯಿ ಮತ್ತು ಶಿಶುವಿನ ಉತ್ತಮ ಆರೋಗ್ಯ ಕಾಪಾಡುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದರು.
ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯೆ ವೈದ್ಯಾಧಿಕಾರಿ ಡಾ.ಲಲಿತಾ, ಶಾಲೆಯ ಮುಖ್ಯಶಿಕ್ಷಕ ಶಿವಕುಮಾರ್, ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಿಚಾರಕಿ ವಿ.ಬಿ.ಆಶಾ, ಮೇಲ್ವಿಚಾರಕಿ ಚೈತ್ರ ಆರ್.ರಾವ್, ಪೋಷಣ್ ಅಭಿಯಾನದ ತಾಲ್ಲೂಕು ಸಂಯೋಜಕ ಲೋಕೇಶ್ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..