ದೊಡ್ಡಬಳ್ಳಾಪುರ: ನಗರಸಭೆಯಲ್ಲಿ ಹಲವು ವರ್ಷಗಳಿಂದ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಸೇವೆ ಸಲ್ಲಿಸಿ, ಇತ್ತೀಚೆಗಷ್ಟೇ ವರ್ಗಾವಣೆಯಾಗಿದ್ದ ಎಂ.ಎನ್.ಹರೀಶ್ (42ವರ್ಷ) ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ಕನಕಪುರ ತಾಲೂಕಿನ ಹಾರೋಹಳ್ಳಿ ಮೂಲದ ಮೃತ ಹರೀಶ್ ಮಡದಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದು, ಮೃತರ ಅಂತ್ಯಕ್ರಿಯೆ ಹಾರೋಹಳ್ಳಿಯಲ್ಲಿ ನಡೆಯಲಿದೆ ಎಂದು ನಗರಸಭೆ ಮೂಲಗಳು ತಿಳಿಸಿವೆ.
ಹರೀಶ್ ಅವರ ಅಕಾಲಿಕ ನಿಧನಕ್ಕೆ ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..