ದೊಡ್ಡಬಳ್ಳಾಪುರ: ತಾಲೂಕು ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆೆ ವತಿಯಿಂದ ಸೋಮವಾರ ಕೋವಿಡ್-19 ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಯಿತು.
ನಗರದ ವಕೀಲರ ಭವನದಲ್ಲಿ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ ವಕೀಲರ ಕುಟುಂಬದವರಿಗೆ ಲಸಿಕೆ ನೀಡಲಾಯಿತು.
ಈ ವೇಳೆ ಸುಮಾರು 120 ಮಂದಿಗೆ ಲಸಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಅರವಿಂದ್ ಸಾಯಿ ಬಣ್ಣ ಅಗರ್ಗಿ, ಅಪರ ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಜ್ಯೋತಿ ಕಾಳೆ, ಅಪರ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಂ.ಬೈರೇಗೌಡ, ಪ್ರಧಾ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಎ.ವಿ.ಮುರುಳಿಧರ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..