ಬೆಂ.ಗ್ರಾ.ಜಿಲ್ಲೆ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಅನೇಕ ವರ್ಷಗಳಿಂದ ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಸಮಸ್ಯೆಗಳನ್ನು ಬಗೆಹರಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವಿಭಾಗವಾರು ‘ಕೈಗಾರಿಕಾ ಅದಾಲತ್’ಗಳನ್ನು ನಡೆಸಲು ಸೂಚಿಸಿದ ಹಿನ್ನೆಲೆ ಬೆಂಗಳೂರು ವಿಭಾಗದ ವ್ಯಾಪ್ತಿಗೆ ಬರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2021ರ ಸೆಪ್ಟೆಂಬರ್ 27ರಂದು ಕೈಗಾರಿಕಾ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಕೈಗಾರಿಕಾ ಸಮಸ್ಯೆಗಳು ಇದ್ದಲ್ಲಿ ನಮೂನೆ-1ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೈಗಾರಿಕಾ ಕೇಂದ್ರ ಇಲ್ಲಿಗೆ 2021ರ ಸೆಪ್ಟೆಂಬರ್ 18ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 203, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-ದೊಡ್ಡಬಳ್ಳಾಪುರ ಮುಖ್ಯ ರಸ್ತೆ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂ.ಸಂ.: 080-29787458 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..