ಮೈಸೂರು: ಜಿಲ್ಲಾಡಳಿತವು ಮೈಸೂರು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಜಿಲ್ಲೆಯಲ್ಲಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಗರಿಷ್ಟ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಆ ಹುದ್ದೆಗಳಿಗೆ ಹೊಸ ಅಭ್ಯರ್ಥಿಗಳ ಆಯ್ಕೆಗೆ ಸರ್ಕಾರದ ಪತ್ರ ಸಂ.ಲಾ ಎಲ್.ಎಡಿ/155/2021 ದಿ:31-08-2021 ರಂತೆ ಉದ್ದೇಶಿಸಲಾಗಿದೆ.
ಈ ಬಗ್ಗೆ ಅರ್ಜಿಗಳನ್ನು ಪಡೆದು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಮೈಸೂರಿನಲ್ಲಿ ಹುದ್ದೆಗೆ ನೇಮಕಾತಿ ಬಯಸುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಮತ್ತು ಸೇವಾ ಷರತ್ತು ನಿಯಮಾವಳಿ 1977 ನಿಯಮ 26 ರಲ್ಲಿ ತಿಳಿಸಿರುವ ಅಗತ್ಯ ಸರತ್ತುಗಳನ್ನು ಪೂರೈಸಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗೆ ನೇಮಕಾತಿ ಬಯಸುವ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ಜಾತಿ, ವಿದ್ಯಾರ್ಹತೆ, ವಕೀಲ ವೃತ್ತಿಯಲ್ಲಿನ ಅನುಭವ ಇತ್ಯಾದಿ ವಿವರಗಳನ್ನು ನಮೂದಿಸಿದ ಸ್ವಯಂ ವಿವರಣೆಯ ಮಾಹಿತಿಯೊಂದಿಗೆ (ಬಯೋಡಲಾ) ವಿದ್ಯಾರ್ಹತೆ, ವಕೀಲ ವೃತ್ತಿಯಲ್ಲಿ ರಾಜ್ಯ ಬಾರ್ ಕೌನ್ಸಿಲ್ ನೋಂದಣಿ ಮತ್ತು ವಕೀಲ ವೃತ್ತಿಯಲ್ಲಿ ಹೊಂದಿರುವ ಅನುಭವದ ಬಗ್ಗೆ ಸ್ಥಳೀಯ ವಕೀಲರ ಸಂಘದ ದೃಢೀಕರಣ ಪತ್ರ ಇತ್ಯಾದಿ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 30 ರೊಳಗಾಗಿ ಕಛೇರಿ ವೇಳೆಯಲ್ಲಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 5.30 ಗಂಟೆಯೊಳಗೆ ಮೈಸೂರು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……