ಬೆಂಗಳೂರು: ಕೋರಮಂಗಲ ಕಾರು ಅಪಘಾತ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷದಿಂದಾಗಿ ಬೈಕ್ ಸವಾರರಿಬ್ಬರು ಫ್ಲೈಓವರ್ ಮೇಲಿಂದ ಕೆಳಗಡೆ ಹಾರಿಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕಾರು ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದಾಗಿ ಬಲೆನೋ ಕಾರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿಯ ಫ್ಲೈಓವರ್ ಸಿಂಗಸಂದ್ರ ಬಳಿ ಘಟನೆ ನಡೆದಿದ್ದು, ಕಾರ್ ಗುದ್ದಿದ ರಭಸಕ್ಕೆ ಬುಲೆಟ್ ಬೈಕ್ ನಲ್ಲಿದ್ದ ಯುವಕ, ಯುವತಿ ಇಬ್ಬರು ಸುಮಾರು 30 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾರೆ.
ಮೃತರನ್ನು ಪ್ರೀತಮ್ (30ವರ್ಷ) ಮತ್ತು 28 ವರ್ಷದ ಯುವತಿ ಎಂದು ಗುರುತಿಸಲಾಗಿದ್ದು. ಕಾರಿನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿವೆ ಎನ್ನಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..