ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಸ್ನೇಹಿತ ಹಾಗೂ ಸಂಬಂಧಿಯಾಗಿದ್ದ ರಾಜು ಪಾಟೀಲ ಹೃದಯಾಘಾತದಿಂದ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಶಕ್ತಿನಗರದ ನಿವಾಸಿಯಾಗಿದ್ದ ರಾಜು ಪಾಟೀಲ್, ಬೊಮ್ಮಾಯಿಯವರಿಗೆ ದಶಕದಿಂದಲೂ ಪರಮಾಪ್ತ ಸ್ನೇಹಿತರಾಗಿದ್ದರು. ಅಲ್ಲದೇ ತಾಯಿಯ ಕಡೆಯಿಂದ ಸಂಬಂಧಿಯ ಸಹ ಆಗಿದ್ದರು.
ರಾಜು ಪಾಟೀಲ್ ಇಂದು ಸಂಜೆ ಹೃದಯಾಘಾತದಿಂದ ಸಾವನಪ್ಪಿದ್ದು, ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮೃತ ರಾಜು ಪಾಟೀಲರ ಅಂತ್ಯಕ್ರಿಯೆ ನಾಳೆ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಮುಂಜಾನೆ ಹುಬ್ಬಳ್ಳಿಗೆ ತೆರಳಲಿದ್ದಾರೆ ಎಂದು ಮೂಲಗಳು ಹರಿತಲೇಖನಿಗೆ ತಿಳಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……