ಸೆ.17ರಂದು ದೊಡ್ಡಬಳ್ಳಾಪುರ ತಾಲೂಕಿನಾಧ್ಯಂತ ವಿಶೇಷ ಕೋವಿಡ್-19 ಲಸಿಕಾ ಮೇಳ / 40 ಸಾವಿರ ಲಸಿಕೆ ಗುರಿ

ದೊಡ್ಡಬಳ್ಳಾಪುರ: ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಸೆಪ್ಟೆಂಬರ್ 17ರಂದು ತಾಲೂಕಿನಾಧ್ಯಂತ ವಿಶೇಷ ಲಸಿಕಾ ಮೇಳ ಆಯೋಜಿಲಾಗಿದೆ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ಹಾಗೂ ತಾಲೂಕುಪಂಚಾಯಿತಿ ಇಒ ಟಿ.ಮುರುಡಯ್ಯ ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಗೆ ಮಾಹಿತಿ‌ ನೀಡಿರುವ ಅವರು, ಸೆಪ್ಟೆಂಬರ್ 17ರಂದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವಿಶೇಷ ಲಸಿಕಾ ಮೇಳ  ಆಯೋಜಿಸಿ ಮೊದಲ ಡೋಸ್ ಮತ್ತು 2ನೇ ಡೋಸ್ ಲಸಿಕೆ ಬಾಕಿ ಸೇರಿದಂತೆ  ಒಟ್ಟು 40 ಸಾವಿರ ಜನರಿಗೆ ಲಸಿಕೆ ನೀಡಲು ಗುರಿ ಹೊಂದಲಾಗಿದೆ.

ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ತಾಲೂಕಿನ 16 ಆರೋಗ್ಯ ಕೇಂದ್ರಗಳಿಗೆ ವಿಶೇಷ ಲಸಿಕೆ ತಂಡವನ್ನು ನೇಮಿಸಲಾಗಿದೆ. ಈ ತಂಡ ಲಸಿಕೆ ಪಡೆಯದ ಹೆಚ್ಚು ಜನರಿರುವ ಗ್ರಾಮಗಳಿಗೆ ತೆರಳಿ ಲಸಿಕೆ ಕಾರ್ಯ ಮಾಡಲಿದ್ದಾರೆಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ತಾಲೂಕು ಪಂಚಾಯಿತಿ ಸಹಯೋಗ: ವಿಶೇಷ ಲಸಿಕಾ ಮೇಳದಲ್ಲಿ ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಲಿದ್ದು, ಸ್ವಚ್ಚತಾ ವಾಹನಗಳಲ್ಲಿ ಪ್ರಚಾರ ನೀಡಲಿದ್ದಾರೆ. ಮುಖ್ಯಮಂತ್ರಿಗಳು ನೀಡಿರುವ ಸಲಹೆಯ ಅನ್ವಯ ನಿಗದಿ ಪ್ರಮಾಣದ ಲಸಿಕೆ‌ ನೀಡಲು ತಾಲೂಕು ಆಡಳಿತದೊಂದಿಗೆ ಸಂಪೂರ್ಣ ಸಹಕಾರ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಇಒ ಟಿ.ಮುರುಡಯ್ಯ ತಿಳಿಸಿದ್ದಾರೆ.

ಜನರೇ ಸಹಕರಿಸಿ: ಮೊದಲ ಡೋಸ್ ಲಸಿಕೆ ಪಡೆದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಅಥವಾ ಲಸಿಕಾ ಕೇಂದ್ರಗಳಲ್ಲೇ ಲಸಿಕೆ ಪಡೆಯಬೇಕೆಂಬ ನಿಯಮವಿಲ್ಲ. ಪ್ರಸ್ತುತ ತಮಗೆ ಹತ್ತಿರವಿರುವ ಲಸಿಕಾ ಕೇಂದ್ರಗಳಲ್ಲಿ  ಆಧಾರ್ ಪ್ರತಿಯೊಂದಿಗೆ ತೆರಳಿ ಲಸಿಕೆ ಪಡೆಯಬಹುದಾಗಿದೆ. ಆದ್ಯತೆಯ ಮೇಲೆ  ಸೆ.17 ರಂದು 1 ಮತ್ತು 2ನೇ ಡೋಸ್ ಕೋವಿಡ್ ಲಸಿಕೆ ನೀಡಲು ತಾಲೂಕಿನಾಧ್ಯಂತ ವಿಶೇಷ ಲಸಿಕಾ ಮೇಳ ಹಮ್ಮಿಕೋಂಡಿದ್ದು ತಮಗೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಥವಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ  ಲಸಿಕೆ ಹಾಕಿಸಿಕೊಳ್ಳುವ ಮೂಲಕ ತಾಲೂಕು ಆಡಳಿತಕ್ಕೆ ತಮ್ಮ ಅಮೂಲ್ಯ ಸಹಕಾರ ನೀಡುವಂತೆ ಈ ವರೆಗೂ ಲಸಿಕೆ ಪಡೆಯದಿರುವ ಹಾಗೂ 2ನೇ ಡೋಸ್ ಪಡೆಯಲು ಅರ್ಹರಿರುವ ಜಿಲ್ಲೆಯ ಜನರಿಗೆ ತಹಶೀಲ್ದಾರ್ ಮತ್ತು ಇಒ ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

ಜೆಡಿಎಸ್ ಹೊರತಾಗಿ ಇತರ ಪಕ್ಷಗಳ ಸಂಸದರು ಸಭೆಯಲ್ಲಿ ಭಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ನೋಟಿಫಿಕೇಷನ್ ಮಾಡುವುದಕ್ಕೆ ಯಾವುದೇ ಕಾನೂನಿನ ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲೇ ನಮ್ಮದೇ ಆದ ತೀರ್ಮಾನ ಮಾಡುತ್ತೇವೆ. ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕಾಗಬಹುದು" ಎಂದು

[ccc_my_favorite_select_button post_id="120333"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!