ದೊಡ್ಡಬಳ್ಳಾಪುರ: ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಸೆಪ್ಟೆಂಬರ್ 17ರಂದು ತಾಲೂಕಿನಾಧ್ಯಂತ ವಿಶೇಷ ಲಸಿಕಾ ಮೇಳ ಆಯೋಜಿಲಾಗಿದೆ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ಹಾಗೂ ತಾಲೂಕುಪಂಚಾಯಿತಿ ಇಒ ಟಿ.ಮುರುಡಯ್ಯ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಸೆಪ್ಟೆಂಬರ್ 17ರಂದು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವಿಶೇಷ ಲಸಿಕಾ ಮೇಳ ಆಯೋಜಿಸಿ ಮೊದಲ ಡೋಸ್ ಮತ್ತು 2ನೇ ಡೋಸ್ ಲಸಿಕೆ ಬಾಕಿ ಸೇರಿದಂತೆ ಒಟ್ಟು 40 ಸಾವಿರ ಜನರಿಗೆ ಲಸಿಕೆ ನೀಡಲು ಗುರಿ ಹೊಂದಲಾಗಿದೆ.
ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ನಿಟ್ಟಿನಲ್ಲಿ ತಾಲೂಕಿನ 16 ಆರೋಗ್ಯ ಕೇಂದ್ರಗಳಿಗೆ ವಿಶೇಷ ಲಸಿಕೆ ತಂಡವನ್ನು ನೇಮಿಸಲಾಗಿದೆ. ಈ ತಂಡ ಲಸಿಕೆ ಪಡೆಯದ ಹೆಚ್ಚು ಜನರಿರುವ ಗ್ರಾಮಗಳಿಗೆ ತೆರಳಿ ಲಸಿಕೆ ಕಾರ್ಯ ಮಾಡಲಿದ್ದಾರೆಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ತಾಲೂಕು ಪಂಚಾಯಿತಿ ಸಹಯೋಗ: ವಿಶೇಷ ಲಸಿಕಾ ಮೇಳದಲ್ಲಿ ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಲಿದ್ದು, ಸ್ವಚ್ಚತಾ ವಾಹನಗಳಲ್ಲಿ ಪ್ರಚಾರ ನೀಡಲಿದ್ದಾರೆ. ಮುಖ್ಯಮಂತ್ರಿಗಳು ನೀಡಿರುವ ಸಲಹೆಯ ಅನ್ವಯ ನಿಗದಿ ಪ್ರಮಾಣದ ಲಸಿಕೆ ನೀಡಲು ತಾಲೂಕು ಆಡಳಿತದೊಂದಿಗೆ ಸಂಪೂರ್ಣ ಸಹಕಾರ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಇಒ ಟಿ.ಮುರುಡಯ್ಯ ತಿಳಿಸಿದ್ದಾರೆ.
ಜನರೇ ಸಹಕರಿಸಿ: ಮೊದಲ ಡೋಸ್ ಲಸಿಕೆ ಪಡೆದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಅಥವಾ ಲಸಿಕಾ ಕೇಂದ್ರಗಳಲ್ಲೇ ಲಸಿಕೆ ಪಡೆಯಬೇಕೆಂಬ ನಿಯಮವಿಲ್ಲ. ಪ್ರಸ್ತುತ ತಮಗೆ ಹತ್ತಿರವಿರುವ ಲಸಿಕಾ ಕೇಂದ್ರಗಳಲ್ಲಿ ಆಧಾರ್ ಪ್ರತಿಯೊಂದಿಗೆ ತೆರಳಿ ಲಸಿಕೆ ಪಡೆಯಬಹುದಾಗಿದೆ. ಆದ್ಯತೆಯ ಮೇಲೆ ಸೆ.17 ರಂದು 1 ಮತ್ತು 2ನೇ ಡೋಸ್ ಕೋವಿಡ್ ಲಸಿಕೆ ನೀಡಲು ತಾಲೂಕಿನಾಧ್ಯಂತ ವಿಶೇಷ ಲಸಿಕಾ ಮೇಳ ಹಮ್ಮಿಕೋಂಡಿದ್ದು ತಮಗೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಥವಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ತಾಲೂಕು ಆಡಳಿತಕ್ಕೆ ತಮ್ಮ ಅಮೂಲ್ಯ ಸಹಕಾರ ನೀಡುವಂತೆ ಈ ವರೆಗೂ ಲಸಿಕೆ ಪಡೆಯದಿರುವ ಹಾಗೂ 2ನೇ ಡೋಸ್ ಪಡೆಯಲು ಅರ್ಹರಿರುವ ಜಿಲ್ಲೆಯ ಜನರಿಗೆ ತಹಶೀಲ್ದಾರ್ ಮತ್ತು ಇಒ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……