ಬೆಂಗಳೂರು: ದೇಶದ ಪ್ರತಿಷ್ಠಿತ ತಿರುಮಲ ತಿರುಪತಿ ಟ್ರಸ್ಟ್ಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನ ಸದಸ್ಯರನ್ನಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಯಲಹಂಕ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಎಸ್.ಆರ್. ವಿಶ್ವನಾಥ್ ಅವರನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಲಾಗಿದೆ.
ಇದಕ್ಕು ಮುನ್ನಾ ಬೆಂಗಳೂರಿನ ತಿರುಮಲ ತಿರುಪತಿ ಟ್ರಸ್ಟ್ ನ ಸ್ಥಳೀಯ ಸಲಹಾ ಮಂಡಳಿಯ ಉಪಾಧ್ಯಕ್ಷರಾಗಿ ವಿಶ್ವನಾಥ್ ಅವರು ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಈ ಹುದ್ದೆಗೆ ನೇಮಕ ಮಾಡಿರುವುದಕ್ಕೆ ವಿಶ್ವನಾಥ್ ಅವರು ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಮತ್ತು ಆಂಧ್ರಪ್ರದೇಶ ಸರ್ಕಾರದ ಪಂಚಾಯತ್ ರಾಜ್ ಮತ್ತು ಗಣಿ ಸಚಿವ ರಾಮಚಂದ್ರರೆಡ್ಡಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……