ಬೆಂ.ಗ್ರಾ.ಜಿಲ್ಲೆ: ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಇಲಾಖೆಯ ಅನುದಾನದಲ್ಲಿ ದೊಡ್ಡಬಳ್ಳಾಪುರ ನಗರದಲ್ಲಿ ನಡೆಯುತ್ತಿರುವ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ವತಿಯಿಂದ ನಡೆಯುತ್ತಿರುವ ಯಾವುದೇ ಸೇವೆ ಹಾಗೂ ಯೋಜನೆಗಳಿಗೆ ಯಾವುದೇ ಹಣ ನಿಗದಿಪಡಿಸಿರುವುದಿಲ್ಲ ಹಾಗೂ ಇಲಾಖೆಯ ಎಲ್ಲಾ ಯೋಜನೆಗಳು ಸಂಪೂರ್ಣ ಉಚಿತವಾಗಿರುತ್ತವೆ.
ಇಲಾಖೆ ಹೆಸರು ಹೇಳಿಕೊಂಡು ಯಾವುದೇ ವ್ಯಕ್ತಿ ಇಲಾಖಾ ಯೋಜನೆ ಅಥವಾ ಇತರೆ ವಿಷಯಗಳಿಗೆ ಹಣದ ಬೇಡಿಕೆ ಇಟ್ಟರೆ, ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸುವುದು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಕಲಚೇತನರ ಸಹಾಯವಾಣಿ ಸಂಖ್ಯೆ: 08029787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..