ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮ ಭೂಮಿಯಲ್ಲಿ ನಾವೀದ್ದೀವಿ ಅನ್ನೋದೆ ಹೆಮ್ಮೆಯ ವಿಚಾರ: ಡಿಸಿ ಆರ್.ಲತಾ

ಚಿಕ್ಕಬಳ್ಳಾಪುರ: ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಸ್ಮರಣಾರ್ಥ ಮುದ್ದೇನಹಳ್ಳಿಯ ಜನ್ಮ ಸ್ಥಳದಲ್ಲಿರುವ ಸರ್.ಎಂ.ವಿ ಅವರ  ಪುತ್ತಳಿಗೆ ಜಿಲ್ಲಾಧಿಕಾರಿ ಆರ್.ಲತಾ ಅವರು ಮಾಲಾರ್ಪಣೆ ಮಾಡುವ ಮೂಲಕ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.

ಈ ವೇಳೆ ಅವರು ಸುದ್ಧಿಗಾರರೊಂದಿಗೆ ಮಾತನಾಡಿ ಭಾರತ ಕಂಡ ಅಪ್ರತಿಮ ಸಾಧಕ ಹಾಗೂ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಿದ ಅಗ್ರಗಣ್ಯ ಅಭಿಯಂತರರಾದ  ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮ ಭೂಮಿಯಲ್ಲಿ ನಾವೀದ್ದೀವಿ ಅನ್ನೋದೆ ಹೆಮ್ಮೆಯ ವಿಚಾರ,ಅವರು ನಮ್ಮ ಜಿಲ್ಲೆಯವರೇ ಆಗಿರುವುದು ಚಿಕ್ಕಬಳ್ಳಾಪುರ ಜಿಲ್ಲೆಗೆ ಹೆಮ್ಮೆಯ ಸಂಗತಿ. ಅವರ ಜನ್ಮ ಜಿಲ್ಲೆಯಲ್ಲಿ  ಕೆಲಸಮಾಡಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಭಾವಿಸುತ್ತೇನೆ ಈ ಮಾಹಾನ್ ಸಾಧಕರ ಜನ್ಮ ದಿನದ  ಸ್ಮರಣಾರ್ಥ ಇಂಜಿನಿಯರ್‌ಗಳು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅಭಿಯಂತರರ ದಿನವನ್ನು ಆಚರಿಸಲಾಗುತ್ತಿದೆ. ರಾಷ್ಟ್ರ ನಿರ್ಮಾಣದಲ್ಲಿ ಮಹತ್ತರ ಕೊಡುಗೆ ನೀಡುತ್ತಿರುವ ಎಲ್ಲಾ ಪರಿಶ್ರಮಿ ಇಂಜಿನಿಯರ್‌ಗಳಿಗೆ ಅಭಿಯಂತರರ ದಿನದ ಶುಭಾಶಯಗಳನ್ನು ಜಿಲ್ಲಾಧಿಕಾರಿಗಳು ತಿಳಿಸಿದರು. 

ಶಿಕ್ಷಣ,ಕೈಗಾರಿಕಾ, ನಿರಾವರಿ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿ  ಕೊಡುಗೆ ನೀಡಿರುವ ಸರ್ ಎಂ.ವಿಶ್ವೇಶ್ವರಯ್ಯನವರ ಪೋಟೊ ಇಟ್ಟು ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜನರು  ಪೂಜಿಸುತ್ತಾರೆ ಅಂತಹ ಸಾಧಕರ ಹೇಸರಿನಲ್ಲಿ  ಚಿಕ್ಕಬಳ್ಳಾಪುರ ತಾಲೂಕಿನ ಅಂಗಟ್ಟ ಬಳಿ 14.9 ಕೋಟಿ ವೆಚ್ಚದಲ್ಲಿ ಮಾಸ್ಟರ್ ಟ್ರೈನರ್ಸ್ ಗಳಿಗೆ ತರಬೇತಿ ನೀಡುವ ಸರ್ ಎಂ.ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸಿಟ್ಯೂಟ್ ಪಾರ್ ಸೂಪರ್ ಟ್ರೈನರ್ಸ ಸಂಸ್ಥೆಯನ್ನು ಸ್ಥಾಪಿಸಲಾಗುತ್ತಿದ್ದು, ಇದು ಏಷ್ಯಾದಲ್ಲೇ  ಏಕೈಕ  ಹಾಗೂ ಮೊದಲ   ಕೌಶಲ್ಯ ತರಬೇತಿ ಸಂಸ್ಥೆಯಾಗಲಿದೆ ಈ ಸಂಸ್ಥೆಯ ಕಟ್ಟಡ ಕಾಮಗಾರಿ ಭರದಿಂದ ಸಾಗುತ್ತಿದ್ದು 2022ಕ್ಕೆ ಲೋಕಾರ್ಪಣೆಯಾಗುವ ನಿರೀಕ್ಷೆಯಿದೆ. ಇದಲ್ಲದೆ ಮುದ್ದೇನಹಳ್ಳಿ ಸಮೀಪ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಶಾಖೆಯು  ಕಳೆದ ಕೆಲವು ವರ್ಷಗಳಿಂದ  ನಡೆಯುತ್ತಿದ್ದು ಉನ್ನತ ಶಿಕ್ಷಣಕ್ಕೆ ಜಿಲ್ಲೆಗೆ ಸಹಕಾರಿಯಾಗಿದೆ ಎಂದರು.

ಮುದ್ದೇನಹಳ್ಳಿಯಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯ ಮ್ಯೂಸಿಯಂ ಅಭಿವೃದ್ಧಿ   ಹಾಗೂ ಸರ್ ಎಂ.ವಿ ಅವರ ಜನ್ಮ ಸ್ಥಳದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರ ಕುಟುಂಸ್ಥರಿಂದ ಅಭಿಪ್ರಾಯ ಪಡೆದು  ಅಭಿವೃದ್ಧಿ   ಕಾರ್ಯಗಳನ್ನು ಕೈಗೊಳ್ಳಲಾಗುವುದು. ಪ್ರಸ್ತುತ ಇಲ್ಲಿನ ಉಸ್ತುವಾರಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನು  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವೆ ನೋಡಿಕೊಳ್ಳುತ್ತಿದೆ ಎಂದರು.

ಈ ವೇಳೆ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರು ಭಾರತ ರತ್ನ  ಸರ್ ಎಂ.ವಿಶ್ವೇಶ್ವರಯ್ಯನವರ ಪುತ್ತಳಿಗೆ  ಮಾಲಾರ್ಪಣೆ ಮಾಡುವ ಮೂಲಕ  ಪುಷ್ಪ ನಮನ  ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ತಾಲೂಕು ತಹಸಿಲ್ದಾರ್ ಗಣಪತಿ ಶಾಸ್ತ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು,ಶಾಲಾ ಮಕ್ಕಳು ಮತ್ತು ಪ್ರವಾಸಿಗರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]