ಚಿಕ್ಕಬಳ್ಳಾಪುರ: ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಸ್ಮರಣಾರ್ಥ ಮುದ್ದೇನಹಳ್ಳಿಯ ಜನ್ಮ ಸ್ಥಳದಲ್ಲಿರುವ ಸರ್.ಎಂ.ವಿ ಅವರ ಪುತ್ತಳಿಗೆ ಜಿಲ್ಲಾಧಿಕಾರಿ ಆರ್.ಲತಾ ಅವರು ಮಾಲಾರ್ಪಣೆ ಮಾಡುವ ಮೂಲಕ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಈ ವೇಳೆ ಅವರು ಸುದ್ಧಿಗಾರರೊಂದಿಗೆ ಮಾತನಾಡಿ ಭಾರತ ಕಂಡ ಅಪ್ರತಿಮ ಸಾಧಕ ಹಾಗೂ ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಿದ ಅಗ್ರಗಣ್ಯ ಅಭಿಯಂತರರಾದ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮ ಭೂಮಿಯಲ್ಲಿ ನಾವೀದ್ದೀವಿ ಅನ್ನೋದೆ ಹೆಮ್ಮೆಯ ವಿಚಾರ,ಅವರು ನಮ್ಮ ಜಿಲ್ಲೆಯವರೇ ಆಗಿರುವುದು ಚಿಕ್ಕಬಳ್ಳಾಪುರ ಜಿಲ್ಲೆಗೆ ಹೆಮ್ಮೆಯ ಸಂಗತಿ. ಅವರ ಜನ್ಮ ಜಿಲ್ಲೆಯಲ್ಲಿ ಕೆಲಸಮಾಡಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಭಾವಿಸುತ್ತೇನೆ ಈ ಮಾಹಾನ್ ಸಾಧಕರ ಜನ್ಮ ದಿನದ ಸ್ಮರಣಾರ್ಥ ಇಂಜಿನಿಯರ್‌ಗಳು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅಭಿಯಂತರರ ದಿನವನ್ನು ಆಚರಿಸಲಾಗುತ್ತಿದೆ. ರಾಷ್ಟ್ರ ನಿರ್ಮಾಣದಲ್ಲಿ ಮಹತ್ತರ ಕೊಡುಗೆ ನೀಡುತ್ತಿರುವ ಎಲ್ಲಾ ಪರಿಶ್ರಮಿ ಇಂಜಿನಿಯರ್‌ಗಳಿಗೆ ಅಭಿಯಂತರರ ದಿನದ ಶುಭಾಶಯಗಳನ್ನು ಜಿಲ್ಲಾಧಿಕಾರಿಗಳು ತಿಳಿಸಿದರು.
ಶಿಕ್ಷಣ,ಕೈಗಾರಿಕಾ, ನಿರಾವರಿ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಕೊಡುಗೆ ನೀಡಿರುವ ಸರ್ ಎಂ.ವಿಶ್ವೇಶ್ವರಯ್ಯನವರ ಪೋಟೊ ಇಟ್ಟು ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜನರು ಪೂಜಿಸುತ್ತಾರೆ ಅಂತಹ ಸಾಧಕರ ಹೇಸರಿನಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಅಂಗಟ್ಟ ಬಳಿ 14.9 ಕೋಟಿ ವೆಚ್ಚದಲ್ಲಿ ಮಾಸ್ಟರ್ ಟ್ರೈನರ್ಸ್ ಗಳಿಗೆ ತರಬೇತಿ ನೀಡುವ ಸರ್ ಎಂ.ವಿಶ್ವೇಶ್ವರಯ್ಯ ಇಂಟರ್ ನ್ಯಾಷನಲ್ ಇನ್ಸಿಟ್ಯೂಟ್ ಪಾರ್ ಸೂಪರ್ ಟ್ರೈನರ್ಸ ಸಂಸ್ಥೆಯನ್ನು ಸ್ಥಾಪಿಸಲಾಗುತ್ತಿದ್ದು, ಇದು ಏಷ್ಯಾದಲ್ಲೇ ಏಕೈಕ ಹಾಗೂ ಮೊದಲ ಕೌಶಲ್ಯ ತರಬೇತಿ ಸಂಸ್ಥೆಯಾಗಲಿದೆ ಈ ಸಂಸ್ಥೆಯ ಕಟ್ಟಡ ಕಾಮಗಾರಿ ಭರದಿಂದ ಸಾಗುತ್ತಿದ್ದು 2022ಕ್ಕೆ ಲೋಕಾರ್ಪಣೆಯಾಗುವ ನಿರೀಕ್ಷೆಯಿದೆ. ಇದಲ್ಲದೆ ಮುದ್ದೇನಹಳ್ಳಿ ಸಮೀಪ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಶಾಖೆಯು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದ್ದು ಉನ್ನತ ಶಿಕ್ಷಣಕ್ಕೆ ಜಿಲ್ಲೆಗೆ ಸಹಕಾರಿಯಾಗಿದೆ ಎಂದರು.
ಮುದ್ದೇನಹಳ್ಳಿಯಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯ ಮ್ಯೂಸಿಯಂ ಅಭಿವೃದ್ಧಿ ಹಾಗೂ ಸರ್ ಎಂ.ವಿ ಅವರ ಜನ್ಮ ಸ್ಥಳದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರ ಕುಟುಂಸ್ಥರಿಂದ ಅಭಿಪ್ರಾಯ ಪಡೆದು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಪ್ರಸ್ತುತ ಇಲ್ಲಿನ ಉಸ್ತುವಾರಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವೆ ನೋಡಿಕೊಳ್ಳುತ್ತಿದೆ ಎಂದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರು ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪುಷ್ಪ ನಮನ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ತಾಲೂಕು ತಹಸಿಲ್ದಾರ್ ಗಣಪತಿ ಶಾಸ್ತ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು,ಶಾಲಾ ಮಕ್ಕಳು ಮತ್ತು ಪ್ರವಾಸಿಗರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……