ದೊಡ್ಡಬಳ್ಳಾಪುರ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಗ್ರಾಮಾಂತರ ಘಟಕದ ಕಾರ್ಯಕರ್ತರು, ಗಿಡ ನೆಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನವನ್ನು ಆಚರಿಸಿದರು.
ತಾಲ್ಲೂಕಿನ ಅರ್ಕಾವತಿ ದೇವಾಲಯ ಆವರಣದಲ್ಲಿ ಗಿಡ ನೆಡುವ ಮೂಲಕ ದೇಶದ ಹೇಮ್ಮೆಯ ಪ್ರಧಾನಿಯವರ ಜನ್ಮದಿನವನ್ನು ಆಚರಿಸಿದರು.
ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಟಿ.ಎನ್.ನಾಗರಾಜು, ಯುವಮೋರ್ಚಾ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್ ನಾಗಸಂದ್ರ, ಚಂದನ್, ಜಿಲ್ಲಾ ಯುವ ಮೋರ್ಚ ಕಾರ್ಯದರ್ಶಿ ಮನು, ತಾಲ್ಲೂಕು ಯುವ ಮೋರ್ಚ ಉಪಾಧ್ಯಕ್ಷ ವಿನಯ್, ಕಾರ್ಯದರ್ಶಿ ಚಂದ್ರು, ಸ್ಥಳೀಯರಾದ ಚನ್ನಕೃಷ್ಣ, ಲೋಕೇಶ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..