ಒರಿಸ್ಸಾದ ಪುರಿಯ ಮೆರೀನ್ ಡ್ರೈವ್ ಬೀಚ್ ನಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಕಲಾವಿದರೊಬ್ಬರ ಮರಳು ಶಿಲ್ಪ ಅರಳಿದೆ. ಆ ಶಿಲ್ಪ ಕನ್ನಡದ ಮೇರು ನಟರಾದ ಡಾ.ವಿಷ್ಣುವರ್ಧನ್ ಅವರದ್ದಾಗಿದೆ.
ಈ ಮರಳುಶಿಲ್ಪ 6 ಅಡಿ ಎತ್ತರ ಮತ್ತು 15 ಅಡಿ ಅಗಲದ್ದು, ಹೆಸರಾಂತ ಶಿಲ್ಪಿ ಮನೀಶ್ ಕುಮಾರ್ ಅವರು ಈ ಶಿಲ್ಪವನ್ನು ರಚಿಸಿದ್ದಾರೆ.
ಗುರುವಾರ ಅನಾವರಣಗೊಂಡ ವಿಷ್ಣುವರ್ಧನ್ ಶಿಲ್ಪ ಮೂರು ದಿನಗಳ ಕಾಲ ಕಡಲ ತೀರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಲಭ್ಯವಿರಲಿದೆ ಎಂದು ಡಾ.ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ.
ನಾಳೆ (ಸೆ.18)ನಟ ವಿಷ್ಣುವರ್ಧನ್ ಅವರ 75ನೇ ವರ್ಷದ ಜಯಂತಿಯನ್ನು ಇಡೀ ರಾಜ್ಯದಾದ್ಯಂತ ಸಂಭ್ರಮದಿಂದ ಆಚರಿಸಲು ಹಲವಾರು ಯೋಜನೆಗಳನ್ನು ವಿಷ್ಣು ಸೇವಾ ಸಮಿತಿ ಹಾಕಿಕೊಂಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..