ಚಿಕ್ಕಬಳ್ಳಾಪುರ: ಕಳೆದ ಕೆಲ ದಿನಗಳ ಹಿಂದೆ ಭಾರೀ ಮಳೆಗೆ ನಂದಿಬೆಟ್ಟದ ಬಳಿಯ ಬ್ರಹ್ಮಗಿರಿ ಬೆಟ್ಟದಿಂದ ಭೂ ಕುಸಿತ ಆಗಿ ನಂದಿಬೆಟ್ಟದ ಮಾರ್ಗದ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದ್ದು..ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಸರ್ಕಾರ ಈಗ 80 ಲಕ್ಷ ಹಣ ಮಂಜೂರು ಮಾಡಿದೆ.
ಆಗಸ್ಟ್ 24 ರಂದು ಭಾರೀ ಮಳೆಯಾಗಿ ಬ್ರಹ್ಮಗಿರಿ ಬೆಟ್ಟದ ಮೇಲಿಂದ ಬೃಹತ್ ಗಾತ್ರದ ಬಂಡೆಗಳು ಉರುಳಿಬಂದು ರಸ್ತೆ ಸಂಪೂರ್ಣ ಕಡಿತಗೊಂಡಿತ್ತು. ಈಗಲೂ ನಂದಿಗಿರಿಧಾಮಕ್ಕೆ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗಿ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
ಇನ್ನೂ ಸೋಮವಾರದಿಂದ ಲೋಕೋಪಯೋಗಿ ಇಲಾಖೆ ವತಿಯಿಂದ ಕಾಮಗಾರಿ ಆರಂಭವಾಗಲಿದ್ದು. ಸರಿ ಸುಮಾರು 45 ದಿನಗಗಳ ಒಳಗಾಗಿ ಕಾಮಗಾರಿ ಮುಗಿಯುವ ವಿಶ್ವಾಸವನ್ನ ಪಿ ಡಬ್ಲ್ಯೂ ಡಿ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ನಂದಿಬೆಟ್ಟದ ಸೌಂದರ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಸಹ ತುದಿಗಾಲಲ್ಲಿ ನಿಂತಿದ್ದು ಅದಷ್ಟು ಬೇಗ ರಸ್ತೆ ಕಾಮಗಾರಿ ಮುಗಿಯಲಿ ಎಂದು ಆಶಿಸುತ್ತಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..