ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಣಸೆಪಾಳ್ಯ ಗ್ರಾಮದ ರಾಜಣ್ಣ (57) ಶುಕ್ರವಾರ ಹೈದಯಾಘತದಿಂದ ನಿಧನ ಹೊಂದಿದ್ದಾರೆ. ಮೃತರಿಗೆ ಪತ್ನಿ,ಪುತ್ರ, ಪುತ್ರಿ ಇದ್ದಾರೆ.ರಾಜಣ್ಣ ಅವರು ತಾಲ್ಲೂಕು ಕುಂಚಿಟಿಗರ ಸಂಘದ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ನವೋದಯ ವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದ ರಾಜಣ್ಣ ಅವರು ಕೊರಟಗೆರೆಯ ಎಲೆರಾಂಪುರದಲ್ಲಿನ ಕುಂಚಿಟಿಗರ ಸಂಸ್ಥಾನಕ್ಕೆ ದಾನವಾಗಿ ನಿವೇಶನಗಳನ್ನು ನೀಡಿದ್ದರು.
ಮೃತರ ನಿಧನಕ್ಕೆ ಎಲೆರಾಂಪುರದಲ್ಲಿನ ಕುಂಚಿಟಿಗರ ಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ಹನುಮಂತನಾಥಸ್ವಾಮೀಜಿ ಹಾಗೂ ಸಂಘದ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ಶುಕ್ರವಾರ ಕೋಳಾಲದಲ್ಲಿ ನಡೆಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..