ದೊಡ್ಡಬಳ್ಳಾಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯಲ್ಲಿ ಜಿ.ಹೊಸಹಳ್ಳಿ ಗ್ರಾಮದಲ್ಲಿ ಸವರ್ಣೀಯ ಹೋಟೆಲುಗಳಲ್ಲಿ ನಮಗೆ ಊಟ ನೀಡುತ್ತಿಲ್ಲ ಹಾಗೂ ಕ್ಷೌರ ಮಾಡುತ್ತಿಲ್ಲ ಎಂಬುದು ಸುಳ್ಳು ಆರೋಪವೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊಸಹಳ್ಳಿಯಲ್ಲಿ ಅಸ್ಪೃಷ್ಯತೆ ಆಚರಣೆ ಆರೋಪದ ಕುರಿತಂತೆ ಇಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸೋಮಶೇಖರ್, ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್ ಹಾಗೂ ಹೊಸಹಳ್ಳಿ ಪೊಲೀಸ್ ಠಾಣೆಯ ಎಎಸ್ ಐ ನಾಗೇಶ್ ಮತ್ತು ವರಲಕ್ಷ್ಮಿ ಅವರ ತಂಡ ಇಂದು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಗ್ರಾಮದ ಸವರ್ಣಿಯರ ಹೋಟೆಲುಗಳಲ್ಲಿ ದಲಿತರಿಗೆ ಊಟ ನೀಡುತ್ತಿಲ್ಲ ಹಾಗೂ ಕ್ಷೌರ ಮಾಡುತ್ತಿಲ್ಲ ಎಂದು ಗ್ರಾಮಪಂಚಾಯಿತಿ ಸದಸ್ಯೆ ಪತಿ ನರಸಿಂಹಯ್ಯ ಎನ್ನುವವರು ಮಾಡಿದ್ದ ಅರೋಪ ಸುಳ್ಳಾಗಿದ್ದು, ದಲಿತ ಸಮುದಾಯದವರೊಂದಿಗೆ ಅದೇ ಹೋಟೆಲ್ ನಲ್ಲಿ ಸಹಭೋಜನ ಮಾಡಿದ್ದಲ್ಲದೆ, ಕ್ಷೌರದ ಅಂಗಡಿಗೆ ತೆರಳಿ ದಲಿತ ಸಮುದಾಯದವರಿಗೆ ಕ್ಷೌರ ಮಾಡಿಸಲಾಗಿದೆ ಎಂದಿದ್ದಾರೆ.
ಮುಂದಿನ ದಿನಗಳಲ್ಲಿ ರಹಸ್ಯವಾಗಿಯೂ ಗಮನಹರಿಸಿದ್ದೇವೆ ಯಾವುದೇ ಕಾರಣಕ್ಕೂ ಅಸ್ಪೃಶ್ಯತೆ ಆಚರಣೆ ಸಲ್ಲದು ಎಂಬ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..