ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಗುದ್ದಿದ ಪರಿಣಾಮ, ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಓಬಳಾಪುರದ ಬಳಿ ನಡೆದಿದೆ.
ಮೃತರನ್ನು ದೊಡ್ಡಬಳ್ಳಾಪುರ ತಾಲೂಕಿನ ಹುಣಸೆಪಾಳ್ಯದ ನಿವಾಸಿ ಹನುಮಂತರಾಜು(36 ವರ್ಷ) ಎಂದು ಗುರುತಿಸಲಾಗಿದೆ.
ತ್ಯಾಮಗೊಂಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತರ ಶರೀರವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..