ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಪೋಷಕರ ಆದಾಯದ ಮಿತಿ, ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‍ಸೈಟ್ www.bcwd.karnataka.gov.in ಅನ್ನು ಸಂಪರ್ಕಿಸಬಹುದು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ಅಕ್ಟೋಬರ್ 22 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ, [email protected] ಇಲ್ಲಿಗೆ ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ/ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಇಲಾಖೆಯ ಸಹಾಯವಾಣಿ ಸಂಖ್ಯೆ: 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..