ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಮತ್ತು ಸಂಸ್ಥೆಗಳಿಗೆ “ರಾಜ್ಯ ಪ್ರಶಸ್ತಿ” ನೀಡಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.25,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/-ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು.
ಆಸಕ್ತರು ಅರ್ಜಿ ನಮೂನೆಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಂದ ಪಡೆದು, ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ, 2021ರ ಅಕ್ಟೋಬರ್ 11 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ: 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ.: 080-29787445 ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ದೇವನಹಳ್ಳಿ ದೂ.ಸಂ.: 080-27682268, ದೊಡ್ಡಬಳ್ಳಾಪುರ ದೂ.ಸಂ.: 080-27625228, ಹೊಸಕೋಟೆ ದೂ.ಸಂ.: 080-27931493, ನೆಲಮಂಗಲ ದೂ.ಸಂ.: 080-2772217 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಗ್ರ್ರಾಮಾಂತರ ಜಿಲ್ಲೆ ಉಪನಿರ್ದೇಶಕಿ ಅನಿತಾಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….