ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರದಲ್ಲಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಇಂದು ಎಣಿಕೆ ಮಾಡಲಾಯಿತು.
ಹುಂಡಿ ಎಣಿಕೆಯಲ್ಲಿ ಒಟ್ಟು ರೂ 60 ಲಕ್ಷ 8 ಸಾವಿರದ 7 ರೂ ಮೊತ್ತ ಸಂಗ್ರಹವಾಗಿದೆ. ಇದರೊಂದಿಗೆ ರೂ 95,150 ಮೌಲ್ಯದ 2 ಕೆಜಿ 600 ಗ್ರಾಂ ಬೆಳ್ಳಿ, 18,500ರೂ ಮೌಲ್ಯದ 05 ಗ್ರಾಂ 05 ಮಿಲಿ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಮುಜರಾಯಿ ತಹಶೀಲ್ದಾರ್ ಜಿ.ಜೆ.ಹೇಮಾವತಿ, ಅಧೀಕ್ಷಕ ರಘುಹುಚ್ಚಪ್ಪ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ, ಪ್ರಧಾನ ಅರ್ಚಕ ಸುಬ್ರಮಣಿ ಸ್ವಾಮಿ, ಇಂಡಿಯನ್ ಓವರ್‍ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.
ಕೋವಿಡ್-19 ಮೂರನೇ ಅಲೆ ತಡೆಗಟ್ಟಲು ಶ್ರಾವಣ ಶನಿವಾರ ಹಾಗೂ ಪ್ರಮುಖ ದಿನಗಳಲ್ಲಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿಷೇಧಿಸಿದ್ದರು, ಕಳೆದ ಸಲದ ಎಣಿಕೆಗಿಂತ ಹೆಚ್ಚಿನ ಕಾಣಿಕೆ ಸಲ್ಲಿಕೆಯಾಗುವ ಮೂಲಕ ಅಚ್ಚರಿ ಮೂಡಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..